ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದ

bkt-3-7
ಬಾಗಲಕೋಟೆ ನಗರದ ಡಿಸಿ ಕಚೇರಿಯಲ್ಲಿ ಶನಿವಾರ ವಿಡಿಯೋ ಸಂವಾದ ಸಭೆಯಲ್ಲಿ ಡಿಸಿ ಜಾನಕಿ ಕೆ.ಎಂ., ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ, ಎಸಿ ಶ್ವೇತಾ ಬೀಡಿಕರ ಇತರರು ಇದ್ದರು.
Published on

ಬಾಗಲಕೋಟೆ: ಕಂದಾಯ ಗ್ರಾಮಕ್ಕೆ ಸಂಬ0ಽಸಿದAತೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಿನ್ನಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಶನಿವಾರ ವಿಡಿಯೋ ಸಂವಾದ ಸಭೆ ಜರುಗಿತು.

ವಿಡಿಯೋ ಸಂವಾದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ ೨೦ ರಂದು ವಿಜಯನಗರದಲ್ಲಿ ಆಸ್ತಿಗಳಿಗೆ ಸಂಬAದಿಸಿದAತೆ, ಒಂದು ಲಕ್ಷ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಾಗಲಕೋಟೆ ಜಿಲ್ಲೆಗೂ ಹಕ್ಕುಪತ್ರ ವಿತರಣೆಯಲ್ಲಿ ಗುರಿ ನಿಗದಿಪಡಿಸಲಾಯಿತು. ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಽಕಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಸಂಬAಽಸಿದ ಭೂ ಸುರಕ್ಷಾ, ಪೌತಿ ಖಾತೆ ಆಂದೋಲನ, ಇ-ಸ್ವತ್ತು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಜಿಲ್ಲಾಽಕಾರಿ ಜಾನಕಿ ಕೆ.ಎಂ ಸಭೆಗೆ ಮಾಹಿತಿ ನೀಡಿದರು. ವಿಡಿಯೋ ಸಂವಾದ ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ, ಜಮಖಂಡಿ ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net