ಕಂಪ್ಲಿ ತಾಲೂಕಿನ ಕೆರೆಗಳನ್ನು ಪುನಶ್ಚೇತನಗೊಳಿಸಿ

04 KAMPLI 01
Published on

ಕಂಪ್ಲಿ: ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ಖಾನ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬಿ.ಗಂಗಾಧರ ಮಾತನಾಡಿ, ಕಂಪ್ಲಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಬಡವರ ಮಕ್ಕಳು, ಕೃಷಿಕರ ಮಕ್ಕಳು ಓದಲು ಆಗದ ಪರಿಸ್ಥಿತಿಯಿದೆ. ಖಾಸಗಿ ಶಾಲೆಗಳಲ್ಲಿ ಸರ್ಕಾರದ ಆದೇಶ ಮೀರಿ ಅಧಿಕ ಶುಲ್ಕ ಪಡೆಯಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಕಂಪ್ಲಿ ತಾಲೂಕು ಕೇಂದ್ರವಾಗಿರುವುದರಿಂದ ಪಟ್ಟಣದಲ್ಲಿ ಬಿಇಒ ಕಚೇರಿ, ಬಸ್ ಡಿಪೋ ಆರಂಭಿಸಬೇಕು. ರಾಮಸಾಗರ ವಿಠ್ಠಲಾಪುರ, ಗೌರಮ್ಮ ಕೆರೆಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net