ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ

dvd
ದೇವದುರ್ಗದ ಮಿನಿವಿಧಾನಸೌಧದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್ ಮಾತನಾಡಿದರು. ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಾನಪ್ಪ ಬಡಿಗೇರ, ಅಕ್ಷರ ದಾಸೋಹ ಅಧಿಕಾರಿ ಬಂದೋಲಿ ಸಾಬ್, ಎಚ್.ಶಿವರಾಜ, ಭೀಮನಗೌಡ ಪಾಟೀಲ್ ಇತರರಿದ್ದರು.
Published on

ದೇವದುರ್ಗ: ಆ.15ರಂದು 76ನೇ ಸ್ವಾತಂತ್ರ್ಯ ದಿನವನ್ನು ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹೇಳಿದರು.


ಪಟ್ಟಣದ ಮಿನಿವಿಧಾನಸೌಧದಲ್ಲಿ ಏರ್ಪಡಿಸಿದ್ದ ಸ್ವಾತಂತ್ರೊೃೀತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಂಗಳವಾರ ಮಾತನಾಡಿದರು. ಅಂದು ಬೆಳಗ್ಗೆ 8ಕ್ಕೆ ನಿಮ್ಮ ಇಲಾಖೆ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಬೇಕು.

ಈ ವೇಳೆ ನೌಕರರು ಕಡ್ಡಾಯವಾಗಿ ಭಾಗಿಯಾಗಿರಬೇಕು. ನಂತರ ತಾಲೂಕು ಆಡಳಿತದಿಂದ ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ಪ್ರತಿ ಇಲಾಖೆ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂರಿಸಬೇಕು. ಪುರಸಭೆ ಅಧಿಕಾರಿಗಳು ಪಟ್ಟಣದ ಸ್ವಚ್ಛತೆ ಆದ್ಯತೆ ನೀಡಬೇಕು. ಕಾರ್ಯಕ್ರಮ ನಡೆಯುವ ಜಾಗದಲ್ಲಿ ನೀರು, ನೆರಳಿನ ವ್ಯವಸ್ಥೆ ಮಾಡಬೇಕು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಬೇಕು.

ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ ಬಹುಮಾನ ನೀಡಬೇಕು. ಧ್ವಜಾರೋಹಣ ಸಂದರ್ಭದಲ್ಲಿ ಎಚ್ಚರಿಕೆವಹಿಸಬೇಕು ಎಂದು ಸೂಚನೆ ನೀಡಿದರು.


ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಾನಪ್ಪ ಬಡಿಗೇರ್, ಅಕ್ಷರ ದಾಸೋಹ ಅಧಿಕಾರಿ ಬಂದೋಲಿ ಸಾಬ್, ಎಚ್.ಶಿವರಾಜ, ಭೀಮನಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net