ಕಟ್ಟಡ ಕಾರ್ಮಿಕರ ಜಿಲ್ಲಾ ಸಮ್ಮೇಳನ ಅ.೨೮ಕ್ಕೆ

8 HVR 2 B
Workers walk in front of the construction site of a commercial complex on the outskirts of the western Indian city of Ahmedabad, in this April 22, 2013 file picture. While India has long suffered from a dearth of workers with vocational skills like plumbers and electricians, efforts to alleviate poverty in poor, rural areas have helped stifle what was once a flood of cheap, unskilled labour from India's poorest states. Struggling to cope with soaring food prices, this dwindling supply of migrant workers are demanding - and increasingly getting - rapid increases in pay and benefits. To match story INDIA-ECONOMY/INFLATION REUTERS/Amit Dave/Files (INDIA - Tags: BUSINESS CONSTRUCTION EMPLOYMENT TPX IMAGES OF THE DAY)
Published on

ಕಲಬುರಗಿ: ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ ನಗರದ ಕನ್ನಡ ಭವನದಲ್ಲಿ ಅ.೨೮, ೨೯ರಂದು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದರು.

ಕಟ್ಟಡ ನಿರ್ಮಾಣ ಇತರ ಕಾರ್ಮಿಕ ಕಲ್ಯಾಣ ಮಂಡಳಿ ೨೦೦೬ರಲ್ಲಿ ಸ್ಥಾಪನೆಯಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸಿಲ್ಲ. ಮಂಡಳಿ ಅನುದಾನ ದುರ್ಬಳಕೆಯಾಗಿದ್ದು, ಈ ಬಗ್ಗೆ ಚರ್ಚೆ ನಡೆಸಲು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

೨೦೨೧-೨೨ರಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಈವರೆಗೂ ಶಿಷ್ಯವೇತನ ನೀಡಿಲ್ಲ. ಕಾರ್ಮಿಕರಿಗೆ ನಿವೃತ್ತಿ ವೇತನ ನೀಡುತ್ತಿಲ್ಲ. ಕಾರ್ಮಿಕರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವುದು ಈ ಸಮ್ಮೇಳನದ ಉದ್ದೇಶ ಎಂದರು.

೨೮ ರಂದು ಬೆಳಗ್ಗೆ ೧೧.೩೦ಕ್ಕೆ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ ತುಮಕೂರ್ ಮೆರವಣಿಗೆಗೆ ಚಾಲನೆ ನೀಡುವರು. ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಸಮ್ಮೇಳನ ಉದ್ಘಾಟಿಸುವರು. ಸಂಘದ ರಾಜ್ಯ ಅಧ್ಯಕ್ಷ ಎಚ್.ಜಿ ಉಮೇಶ ಧ್ವಜಾರೋಹಣ ನೆರವೇರಿಸುವರು. ಜಿಲ್ಲಾಧ್ಯಕ್ಷ ಪ್ರಭುದೇವ ಯಳಸಂಗಿ ಅಧ್ಯಕ್ಷತೆ ವಹಿಸುವರು.

ಮಹೇಶಕುಮಾರ್ ರಾಠೋಡ್, ಜಿ.ಎನ್.ರೇವಣಕರ್, ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ, ಎಚ್.ಎಸ್.ಪತಕಿ, ನಾರಾಯಣ ರೂಗಿ, ಪದ್ಮಾವತಿ ಮಾಲಿಪಾಟೀಲ್, ಬಕ್ಕಪ್ಪ ಅಂಬಲೆ, ಸುಭಾಷ್ ಬಳೂರ್ಗಿ, ಮಾನಪ್ಪ ಕಟ್ಟಿಮನಿ ಉಪಸ್ಥಿತರಿರುವರು ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net