ಕಟ್ಟಡ ಕಾರ್ಮಿಕರ ಪ್ರತಿಭಟನೆ

24-GPT-2
Published on

ಗುಂಡ್ಲುಪೇಟೆ: ಸರ್ಕಾರದಿಂದ ತಮಗೆ ಒದಗಿಸಿರುವ ಸವಲತ್ತುಗಳನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಗುರುವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಸರ್ಕಾರ ಕಾರ್ಮಿಕರ ಅಭಿವೃದ್ಧಿಗೆ ಹಲವಾರು ಸವಲತ್ತುಗಳನ್ನು ಒದಗಿಸುತ್ತಿದ್ದರೂ ನಾನಾ ಕಾರಣಗಳಿಂದ ಅರ್ಹರಿಗೆ ಅವು ತಲುಪುತ್ತಿಲ್ಲ. ತಮ್ಮ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ಬಿಡುಗಡೆ ಮಾಡುತ್ತಿಲ್ಲ. ಇತ್ತೀಚೆಗೆ ಕಾರ್ಮಿಕರು ತಮ್ಮ ಕಾರ್ಡ್ ನವೀಕರಿಸಲು ಹೋದರೆ ವೇತನಪಟ್ಟಿ ಕೇಳುತ್ತಿದ್ದಾರೆ.

ಕಾರ್ಮಿಕರಿಗೆ ಮನೆಕಟ್ಟಲು 5 ಲಕ್ಷ ರೂ. ಸಹಾಯಧನ ನೀಡಬೇಕಾಗಿದ್ದರೂ ಅದನ್ನು ಕೊಡುತ್ತಿಲ್ಲ. ನಕಲಿ ಕಾರ್ಡ್ ಹೊಂದಿರುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ನಿಜವಾದ ಕಾರ್ಮಿಕರಿಗೆ ಸವಲತ್ತುಗಳು ದೊರಕುವಂತೆ ಮಾಡಬೇಕು ಒತ್ತಾಯಿಸಲಾಯಿತು. ನಂತರ ಕಾರ್ಮಿಕ ಇಲಾಖೆಯ ಗುಮಾಸ್ತ ಗಣೇಶ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net