ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

24 ckm 3
ಚಿಕ್ಕಮಗಳೂರಿನ ಸಂತ ಜೋಸೆಫರ ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
Published on

ಚಿಕ್ಕಮಗಳೂರು: ನಗರದ ಸಂತ ಜೋಸೆಫರ ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಮಿಕರ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಹಲವು ಮಂದಿಗೆ ತಪಾಸಣೆ ನಡೆಯಿತು.

ಈ ವೇಳೆ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಜೈರಾಮ್, ಕಾರ್ಮಿಕರ ಇಲಾಖೆಯಲ್ಲಿ ಕಾರ್ಮಿಕರು ಕಾರ್ಮಿಕರ ಕಾರ್ಡ್ ಪಡೆದುಕೊಳ್ಳಬಹುದು. ಲೇಬರ್ ಕಾರ್ಡ್ ಪಡೆದ ಕಾರ್ಮಿಕರಿಗೆ ಕಾರ್ಮಿಕರ ಇಲಾಖೆಯಿಂದ ವಿವಿಧ ಸೌಲಭ್ಯಗಳು ಸಿಗಲಿವೆ ಎಂದು ಹೇಳಿದರು.

ಕಾರ್ಮಿಕರ ಇಲಾಖೆಯು ಕಾರ್ಮಿಕರಿಗೆ ಅಪಘಾತ ಪರಿಹಾರ ಯೋಜನೆ, ವೈದ್ಯಕಿಯ ಧನ ಸಹಾಯ ಯೋಜನೆ, ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಯೋಜನೆ, ಯಾವುದೇ ಪದವಿ ಯವರೆಗೂ ಕಾರ್ಮಿಕನ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಕ್ಲಾಸ್ ಫೀಸ್ ನೀಡುತ್ತಿದೆ. ಜೊತೆಗೆ ಮೊದಲ ಇಬ್ಬರು ಮಕ್ಕಳಿಗೆ ಮದುವೆ ಧನ ಸಹಾಯ ಯೋಜನೆ, ೬೦ ವರ್ಷ ಪೂರೈಸಿದ ಕಾರ್ಮಿಕರಿಗೆ ಪಿಂಚಣಿ ನೀಡುವ ಯೋಜನೆಯಿದೆ ಎಂದು ಮಾಹಿತಿ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಕಾರ್ಮಿನ್ ಡಾಯಸ್ ಮಾತನಾಡಿ, ಕಾರ್ಮಿಕರ ಇಲಾಖೆಯಲ್ಲಿ ನೀಡುವ ಎಲ್ಲ ಸವಲತ್ತುಗಳನ್ನು ನೈಜ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಕಾರ್ಮಿಕರ ಇಲಾಖೆಯಿಂದ ಸುಮಾರು ೨೦ ಬಗೆಯ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಮಕ್ಕಳಿಗೆ ಹಮ್ಮಿಕೊಳ್ಳಲಾಗಿತ್ತು. ಡಾ.ಉಲ್ಲಾಸ್ ಅವರ ತಂಡದಿAದ ಸುಮಾರು ೧೦೦ ಜನರಿಗೆ ಅರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ನಿರ್ಮಲಾ ಡಿಸೋಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net