ಕಟ್ಟೇಪುರದಲ್ಲಿ ಹುಲಿ ಪ್ರತ್ಯಕ್ಷ

Published on

ಚಾಮರಾಜನಗರ: ತಾಲೂಕಿನ ಕಟ್ಟೇಪುರ ಗ್ರಾಮದ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ರೈತರು ಎಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಇಲಾಖೆ ತಿಳಿಸಿದೆ.

ಗ್ರಾಮದ ಜಮೀನೊಂದರಲ್ಲಿ ಹುಲಿ ಇದ್ದ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಅರಣ್ಯ ಇಲಾಖೆಗೆ ಸಿಕ್ಕ ಬಳಿಕ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಹುಲಿ ಕಾಣಿಸಿದ್ದ ಸ್ಥಳ ಕಟ್ಟೇಪುರ ಎಂದು ಖಚಿತ ಪಡಿಸಿದ್ದಾರೆ. ಆದರೆ ಹುಲಿ ಈ ಭಾಗದಿಂದ ಬೇರೆ ಕಡೆ ಹೋಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಗ್ರಾಮದ ರೈತರಿಗೆ ರಾತ್ರಿ ವೇಳೆ ಹೊರಗೆ ಓಡಾಡುವಾಗ ಜಾಗೃತೆ ವಹಿಸಿ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net