ಕಠಿಣ ಪರಿಶ್ರಮದಿಂದ ಯಶಸ್ಸು ನಿಶ್ಚಿತ

15ckd1
Published on

ಚಿಕ್ಕೋಡಿ: ಶ್ರದ್ಧೆ, ಕಠಿಣ ಪರಿಶ್ರಮದಿಂದ ಕೈಗೊಂಡ ಕೆಲಸದಲ್ಲಿ ಯಶಸ್ಸು ನಿಶ್ಚಿತ. ವಿದ್ಯಾರ್ಥಿಗಳು ನಿರಂತರ ಓದುವ ಹವ್ಯಾಸ ಬೆಳೆಕೊಳ್ಳಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ೧೦೦ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳ ಪ್ರತಿಭೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದೇವೆ. ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ಯೋಜನೆಗಳು ಲಭ್ಯವಿದ್ದು ಅದರ ಲಾಭ ಪಡೆದುಕೊಳ್ಳಬೇಕು. ಸಚಿವ ಸತೀಶ ಜಾರಕಿಹೊಳಿ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ೫ಕ್ಕೂ ಹೆಚ್ಚು ಕಡೆ ಕೋಚಿಂಗ್ ಸೆಂಟರ್ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿದ್ದಾರೆ ಎಂದರು.

ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಮಾತನಾಡಿ, ಶಿಕ್ಷಣದಲ್ಲಿ ಅಗಾಧ ಶಕ್ತಿ ಇದೆ. ಶಿಕ್ಷಣದಿಂದ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ. ಸರ್ಕಾರ ಶಿಕ್ಷಣ ನೀಡಲು ಸಾಕಷ್ಟು ಯೋಜನೆ ರೂಪಿಸಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವ ಮೂಲಕ ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಶಾಸಕ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷಣರಾವ ಚಿಂಗಳೆ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಡಿಡಿಪಿಯು ಪಾಂಡುರಂಗ ಭಂಡಾರಿ, ಡಿಡಿಪಿಐ ಆರ್.ಎಸ್.ಸೀತಾರಾಮು, ಉಪನ್ಯಾಸಕ ವಿಶ್ವನಾಥ ಚೌಗಲಾ, ಪುರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಕೋರೆ, ಕೆಪಿಸಿಸಿ ಸದಸ್ಯ ರಾಜು ಕೋಟಗಿ, ಅರ್ಜುನ ನಾಯಿಕವಾಡಿ, ರಾಮಕೃಷ್ಣ ಪಾನಬೂಡೆ, ಶಿವಾನಂದ ಮರ್ಯಾಯಿ ಇತರರಿದ್ದರು. ಶಶಿಕಲಾ ಕೊಟ್ರೆ ನಿರೂಪಿಸಿದರು. ಎಸ್.ಎಂ.ಚಂದಗಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net