ಕಡತ ವಿಲೇವಾರಿಯಲ್ಲಿ ವಿಳಂಬ

bkt-3-1
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯ ತಾಲೂಕಾ ಕ್ಷೇತ್ರ ಶಿಕ್ಷಣಾಽಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿದರು.
Published on

ಬಾಗಲಕೋಟೆ: ನಿಗದಿತ ಅವಽಯಲ್ಲಿ ಕಡತಗಳನ್ನು ವಿಲೇವಾರಿ ಮಾಡದೇ ಬೇಜವಾಬ್ದಾರಿ ತೋರಿದ ಕ್ಷೇತ್ರ ಶಿಕ್ಷಣಾಽಕಾರಿಗಳ ಮೇಲೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯ ತಾಲೂಕಾ ಕ್ಷೇತ್ರ ಶಿಕ್ಷಣಾಽಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಮ್ಮ ಹಂತದಲ್ಲಿ ಬಂದAತಹ ಕಡಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಅಽಕಾರಿಗಳ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಪ್ರಗತಿಯಲ್ಲಿ ಬಹಳ ಕಡಿಮೆಯಾಗಿದೆ. ರಜೆ ನಗದೀಕರಣ, ಕಾಲಮಿತಿ ಬಡ್ತಿ ಸೇರಿದಂತೆ ಇತರೆ ಕೆಲಸಗಳಲ್ಲಿ ವಿಳಂಬ ದೋರಣೆ ಆಗುತ್ತಿದೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಽಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೊಠಡಿ ನಿರ್ಮಾಣ, ಶಾಲಾ ದುರಸ್ಥಿ, ಶೌಚಗೃಹ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನದಡಿ ೪.೮೦ ಕೋಟಿ ರೂ.ಗಳಷ್ಟು ಜಿಲ್ಲೆಗೆ ಬಿಡುಗಡೆಯಾಗಿದೆ. ಈ ಅನುದಾನದ ಖರ್ಚಾದ ಬಗ್ಗೆ ಮಾಹಿತಿ ಕೇಳಿದಾಗ ಯಾರಲ್ಲಿ ಸರಿಯಾದ ಉತ್ತರ ದೊರೆಯಲಿಲ್ಲ. ಅಽಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ. ಈ ಅನುದಾನದ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಕಳೆದ ಸಾಲಿನಲ್ಲಿ ಕೈಗೊಂಡ ದುರಸ್ಥಿ ಕಾರ್ಯ ಪೂರ್ಣಗೊಂಡಿಲ್ಲ. ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ ಖರೀದಿ ಪ್ರಕ್ರಿಯೆ ನಡೆಸಬೇಕು. ಗುಣಮಟ್ಟದ ಶೂಗಳನ್ನು ಖರೀದಿಸಿ ವಿತರಣೆಮಾಡಿ. ಖರೀದಿಯಲ್ಲಿ ಯಾವುದೇ ರೀತಿ ಲೋಪ ಆಗದಂತೆ ಕ್ರಮವಹಿಸಲು ತಿಳಿಸಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹಾಜರಾತಿ ಇರಬೇಕು. ಹೆಚ್ಚಿನ ಗೈರುಹಾಜರಾತಿ ಮಕ್ಕಳು ಇದ್ದಲ್ಲಿ ಅವರನ್ನು ಮನವಲಿಸಿ ಮರಳಿ ಶಾಲೆಗೆ ತರುವ ಕಾರ್ಯವಾಗಬೇಕು. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಕಲಿಕೆ ಸುಧಾರಣೆಗೆ ಶಿಕ್ಷಕರು ಶ್ರಮಿಸಲು ತಿಳಿಸಿದ ಅವರು, ಕ್ಷೇತ್ರ ಶಿಕ್ಷಣಾಽಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಕಲಿಕಾ ಸಾಮರ್ಥ್ಯದ ಬಗ್ಗೆ ಪರಿಶೀಲಿಸಿ ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿದ್ದಾರೆಯೇ ಎಂಬುದನ್ನು ಗಮನಹರಿಸಬೇಕು. ಕೆಲವೊಂದು ಶಿಕ್ಷಕರು ಗೈರಾದರೂ ಹಾಜರಾತಿಯಲ್ಲಿ ಸಹಿ ಮಾಡಿರುತ್ತಾರೆ. ಈ ರೀತಿಯ ಭೇಟಿ ಸಮಯದಲ್ಲಿ ಕಂಡುಬAದಲ್ಲಿ ಶಿಸ್ತುಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಮಕ್ಕಳ ಕಲಿಕೆಯಲ್ಲಿ ಸುಧಾರಣೆ ಮಾಡಿಯೇ ತೀರುತ್ತೇನೆ ಎಂಬ ಮನೋಭಾವನೆ ಶಿಕ್ಷಕರಲ್ಲಿ ಬಂದಾಗ ಮಾತ್ರ ಸುಧಾರಣೆಯಾಗಲು ಸಾಧ್ಯವಾಗುತ್ತದೆ. ಪ್ರಯತ್ನ ಇರಬೇಕು. ಏನು ಮಾಡದೇ ಪ್ರಗತಿ ಆಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಶಿಕ್ಷಕರು ತಮ್ಮ ಮನೋವೃತ್ತಿ ಬದಲಾಯಿಸಿಕೊಳ್ಳಲು ಸೂಚನೆ ನೀಡಿದರು. ಮಳೆಗಾಲ ಪ್ರಾರಂಭವಾಗಿದ್ದು, ಶೀಥಿಲಾವಸ್ಥೆ ಕಟ್ಟಡವನ್ನು ಗುರುತಿಸಿ, ಶಾಲಾ ಮುಖ್ಯೋಪಾಧ್ಯರ ಮೂಲಕ ಮಾಹಿತಿ ಪಡೆದುಕೊಂಡು ಸುಸ್ಥಿತಿಯಲ್ಲಿ ಇದ್ದಲ್ಲಿ ಆ ಬಗ್ಗೆ ದೃಢೀಕರಣ ಸಲ್ಲಿಸುವಂತೆ ಸಿಇಒ ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಎಸ್.ಜಿ.ಮಿರ್ಜಿ, ಇಳಕಲ್ಲ ಡುಯಟ್ ಪ್ರಾಚಾರ್ಯ ಶೇಖರಪ್ಪ ಬಳಬಟ್ಟಿ, ಸರ್ವಶಿಕ್ಷಣ ಅಭಿಯಾನದ ಉಪ ಸಮನ್ವಯಾಽಕಾರಿ ಸಿ.ಆರ್.ಒಣಿ ಸೇರಿದಂತೆ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಽಕಾರಿಗಳು ಹಾಗೂ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net