ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

protest stock-vector-protest-logo-retro-style-hand-popular-protest-261798572
Published on


ಚಾಮರಾಜನಗರ : ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಶನಿವಾರ 13ನೇ ವಾರ್ಡಿನ ಆರ್.ಎಸ್. ದೊಡ್ಡಿ ಉಪ್ಪಾರ ಬಡಾವಣೆಯ ನಿವಾಸಿಗಳು ಪಟ್ಟಣ ಪಂಚಾಯಿತಿ ಕಚೇರಿಗೆ ಆಗಮಿಸಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.


ಈ ವೇಳೆ ನಿವಾಸಿ ಮಹದೇವಮ್ಮ ಮಾತನಾಡಿ, ಬಡಾವಣೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳಿವೆ. ಆದರೆ ಕಳೆದ 3 ತಿಂಗಳಿನಿಂದ ಕೊಳವೆ ನಲ್ಲಿಗಳಿಗೆ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ಅಲೆಯುವಂತಾಗಿದೆ.

ಇತ್ತ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಹಣ ನೀಡಿ ನೀರನ್ನು ಹೊತ್ತು ತರಬೇಕಿದ್ದು, ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ಈ ಬಗ್ಗೆ ನೀರುಗಂಟಿಯನ್ನು ವಿಚಾರಿಸಿದರೆ ಇಲ್ಲಸಲ್ಲದ ಕಾರಣ ನೀಡುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಸದಸ್ಯರಲ್ಲಿ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಕುಡಿಯುವ ನೀರಿಗಾಗಿ ನಿತ್ಯ ಪರದಾಡುವಂತಾಗಿದೆ.

ಆದ್ದರಿಂದ ಬೇಸತ್ತು ಪ್ರತಿಭಟನೆಗೆ ಮುಂದಾಗಿದ್ದೇವೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಡಾವಣೆಯ ನಿವಾಸಿಗಳಾದ ಕುಮಾರ್, ರವಿ, ಶಿವಮ್ಮ, ನೀಲಮ್ಮ, ಮಸಣಮ್ಮ, ಶಾಂತಮ್ಮ, ನೀಲವೇಣಿ, ಲತಾ, ಶಂಕಮ್ಮ, ಸುಶೀಲಮ್ಮ, ಸಿದ್ದರಾಜಮ್ಮ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net