

ಮತದಾನವು ಸಾರ್ವಜನಿಕರ ಮೂಲಭೂತ ಹಕ್ಕು , ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಲ್ ಯಶವಂತ್ ಅವರು ಮನವಿ ಮಾಡಿದರು.
ಹಾಸನ ತಾಲೂಕು ಪಂಚಾಯಿತಿವತಿಯಿಂದ ಗೊರೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಬೈಕ್ ರ‌್ಯಾಲಿಗೆ ಚಾಲನೆ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಹಣ, ಉಡುಗೊರೆ ಹಾಗೂ ಇತರೆ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಯನ್ನ ಆಯ್ಕೆ ಮಾಡುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಕಳೆದ ಬಾರಿ ಈ ಭಾಗದಲ್ಲಿ ಶೇಕಡವಾರು ಮತದಾನ ಕಡಿಮೆಯಾಗಿದ್ದು ಮುಂಬರುವ ವಿಧಾಸಭಾ ಚುನಾವಣೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಅವರು ಜನರಲ್ಲಿ ಜಾಗೃತಿ ಮೂಡಿಸಿದರು.
ಇದೇ ವೇಳೆ ಮತದಾನಕ್ಕೆ ಸಂಬಂಧಪಟ್ಟ ವಿವಿಧ ಪೋಸ್ಟರ್, ಬ್ಯಾನರ್ ಪ್ರದಶಿಸಿ ನಂತರ ಬೈಕ್ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಗೊರೂರು ಗ್ರಾಮ ಪಂಚಾಯಿತಿ ಅಭಿವದ್ಧಿ ಅಧಿಕಾರಿ ಶಿವರಾಜ್, ತಾಲ್ಲೂಕು ಪಂಚಾಯಿತಿ ಐ.ಇ.ಸಿ ಸಂಯೋಜಕ ಮಹೇಶ ಬಿ.ಎಸ್, ದ್ವಿತೀಯ ದರ್ಜೆ ಸಹಾಯಕ ಮೋಹನ್ ಕುಮಾರ್ ಹಾಗೂ ಮತ್ತಿತರರು ಇದ್ದರು