ಕಡ್ಡಾಯ ಮತದಾನಕ್ಕೆ ಮನವೊಲಿಸಿ

PHOTO-2---04
Published on

ಚಿತ್ರದುರ್ಗ: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಪಟ್ಟ ಅಲಂಕರಿಸಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ ಎಂದು ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ಸಮುದಾಯದ ಪ್ರಬುದ್ಧರ ಸಭೆಯಲ್ಲಿ ಮಾತನಾಡಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಒಂದೊಂದು ಬೂತ್‌ನಲ್ಲಿ ಈ ಮುನ್ನೂರಕ್ಕೂ ಹೆಚ್ಚು ಮತಗಳು ಪಕ್ಷಕ್ಕೆ ಸಿಗುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದರು.
ಈ ನಿಟ್ಟಿನಲ್ಲಿ ಮೋದಿ ಅವರ ಜನಪರ ಯೋಜನೆಗಳನ್ನು ಪ್ರತಿ ಮನೆ ತಲುಪಿಸಬೇಕು. ಬೂತ್‌ಮಟ್ಟದಲ್ಲಿ ಗೆದ್ದರೆ ಚುನಾವಣೆ ಗೆದ್ದಂತೆ ಎಂದರು.
ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ನಾಗರಾಜ್ ಬೇದ್ರೆ, ಶಿವಪ್ರಕಾಶ್ ದಗ್ಗೆ, ಶಿವಣ್ಣಾಚಾರ್, ಶ್ರೇಣಿಕ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net