ಕಡ್ಯಾಳ ಜೆಡಿಎಸ್ ರಾಜ್ಯ ಪ್ರ.ಕಾರ್ಯದರ್ಶಿ

6bed26d7fe964ae0abaee6c8493b179c
Published on
ಬೀದರ್: ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿನ ಹಿರಿಯ ಮುಖಂಡ ರಾಜು ಕಡ್ಯಾಳ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿ, ತಕ್ಷಣ ಜವಾಬ್ದಾರಿ ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಎಲ್ಲ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಕಡ್ಯಾಳ ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇವರ ಕಾರ್ಯವೈಖರಿ ಗಮನಿಸಿ ಇದೀಗ ಪಕ್ಷ ಉನ್ನತ ಸ್ಥಾನ ನೀಡಿದೆ.
ಆದೇಶ ವಿತರಣೆ: ರಾಜು ಕಡ್ಯಾಳ ಅವರಿಗೆ ಪಕ್ಷದ ಆದೇಶ ಪತ್ರವನ್ನು ನಗರದಲ್ಲಿ ಗುರುವಾರ ಶಾಸಕ ಬಂಡೆಪ್ಪ ಖಾಶೆಂಪುರ ವಿತರಿಸಿ ಸನ್ಮಾನಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪುರ, ಪ್ರಮುಖರಾದ ಐಲಿನ್ಜಾನ್ ಮಠಪತಿ, ರಾಜಶೇಖರ ಜವಳಿ ಮೊದಲಾದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net