ಕಣ್ಣಿನ ಉಚಿತ ತಪಾಸಣೆ ಶಿಬಿರ

Published on

ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ವಿದ್ಯಾಸಂಸ್ಥೆಯಲ್ಲಿ ಎಚ್.ಕೆ. ಟ್ರಸ್ಟ್, ರೋಟರಿ ಸಂಸ್ಥೆ, ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರ ಸ್ಥಳಕ್ಕೆ ಎಚ್.ಕೆ. ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಪ್ರತಿ ಭಾನುವಾರ ನೇತ್ರ ನಿರಂತರ ಕಾರ್ಯಕ್ರಮದಡಿ ಆಯೋಜಿಸಿರುವ ಕಣ್ಣಿನ ತಪಾಸಣಾ ಶಿಬಿರದ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಿಬಿರದಲ್ಲಿ 150ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. 71ಕ್ಕೂ ಹೆಚ್ಚಿನ ರೋಗಿಗಳನ್ನು ಶಸ್ತ್ರಚಿಕಿತ್ಸೆ ಕೊಡಿಸಲು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ಎಚ್.ಕೆ.ಟ್ರಸ್ಟ್‌ನ ಮಹಾನಂದ ಕೃಷ್ಣಸ್ವಾಮಿ, ರೋಟರಿ ಮಿಡ್‌ಟೌನ್ ಅಧ್ಯಕ್ಷ ಕೆ.ಎಸ್. ವಿನಯ್, ರೋಟರಿ ಸಂಸ್ಥೆ ಅಧ್ಯಕ್ಷ ಕಿರಣ್ ಬಾಬು, ಅರವಿಂದ ಆಸ್ಪತ್ರೆಯ ಸಂಯೋಜಕ ವಿಜಯ್ ಕುಮಾರ್, ವೈದ್ಯರಾದ ಪಿನಂತ್, ಡಾ.ಪದ್ಮಪ್ರಿಯಾ, ಎಚ್.ಕೆ. ಟ್ರಸ್ಟ್ ಮ್ಯಾನೇಜರ್ ರವಿತೇಜ ಮತ್ತಿತರಿದ್ದರು.

13ಕೆಜಿಎಲ್1
ಕೊಳ್ಳೇಗಾಲದ ವಿಶ್ವ ಚೇತನ ವಿದ್ಯಾ ಸಂಸ್ಥೆ ಆವರಣದಲ್ಲಿ ಅಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ನೂರಾರು ರೋಗಿಗಳು ಕಣ್ಣಿನ ತಪಾಸಣೆಗೆ ಒಳಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net