ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮ ಪಂಚಾಯಿತಿಯಿಂದ ಏ.5ರಂದು ಗ್ರಾಮ ಪಂಚಾಯಿತಿ ಆವರಣ ಮತ್ತು ಪಟ್ಟಣದ ಸರ್ಕಾರಿ ನೌಕರರ ಭವನದ (ಸ್ಮಾರ್ಟ್ ಪಬ್ಲಿಕ್ ಸ್ಕೂಲ್) ಆವರಣದಲ್ಲಿ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ಉಚಿತ ಶಿಬಿರ ಆಯೋಜಿಸಲಾಗಿದೆ.
ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು. ಅಲ್ಲದೆ ರಿಯಾಯಿತಿ ದರದಲ್ಲಿ ಕನ್ನಡಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಮೊ: 9481820814/ 8971872924.