ಕಣ್ಣುಗಳ ರಕ್ಷಣೆ ಹೊಣೆ ನಮ್ಮದೇ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ

CTD HIRIAYA NAGAGRIKARU ----
Published on

ಚಿತ್ರದುರ್ಗ: ವಿಜ್ಞಾನವಿಂದು ಎಷ್ಟೇ ಮುಂದುವರಿದಿದ್ದರೂ ಕಣ್ಣುಗಳನ್ನು ಕೃತಕವಾಗಿ ತಯಾರಿಸಲಾಗದು ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇ ಳಿದರು.

ಜಿಲ್ಲಾಡಳಿತ,ಜಿಪಂದಿಂದ ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ‌್ಯಕ್ರಮದಡಿ ನಗರದ ಬಾಲಭವನದಲ್ಲಿ ಶುಕ್ರವಾರ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿ,ನಮ್ಮ ಕಣ್ಣುಗಳ ರಕ್ಷಣೆ ನಮ್ಮದೇ ಜವಾಬ್ದಾರಿಯಾಗಿದೆ. ವಿರೇಂದ್ರ ಪಪ್ಪಿ ಅಭಿಮಾನಿ ಬಳಗ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 10 ಗ್ರಾಪಂಗಳಲ್ಲಿ ಏರ್ಪ ಡಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರದ ಹಿರಿಯ ನಾಗರಿಕರ ಸಹಿತ 4830 ಜನರ ನೇತ್ರ ತಪಾಸಣೆ ನಡೆಸಲಾಗಿದೆ. 213 ಜನರನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯುದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. 861 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಗ್ರಾಪಂಗಳಲ್ಲೂ ಈ ಶಿಬಿರ ಆಯೋಜಿಸಲಾಗುವುದು. ಸರ್ಕಾರ ಆಯೋಜಿಸುವ ಶಿಬಿರಗಳಲ್ಲೂ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ನಾಗರಿಕರಿಗೆ ಸಲಹೆ ನೀಡಿದರು. ಶಾಸಕರ ಅನುದಾನದಲ್ಲಿ 20 ಲಕ್ಷ ರೂ.ಹಿರಿಯ ನಾಗರಿಕರ ಕಲ್ಯಾಣಕ್ಕೆ ಮೀಸಲಿಡುವುದಾಗಿ ಹೇಳಿದರು. ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಪಾಲಕರ ತ್ಯಾಗವಿರುತ್ತದೆ. ಹಿರಿಯನು ಚೆನ್ನಾಗಿ ನೋಡಿಕೊಳ್ಳ ಬೇಕು. ಪ್ರತಿ ಜಿಲ್ಲೆಯಲ್ಲೂ ಮೂರು ವೃದ್ಧಾಶ್ರಮಗಳನ್ನು ಸ್ಥಾಪಿಸಲಾಗಿದೆ. ಹಿರಿಯರಿಗಾಗಿ 1090 ಸಹಾಯವಾಣಿ ತೆರೆಯಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಹಿರಿಯ ನಾಗರಿಕರ ಅವಹಾಲು ಆಲಿಸಲು ನ್ಯಾಯ ಮಂಡಳಿ ಸ್ಥಾಪಿಸಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಮಾತನಾಡಿ,ಹಿರಿಯ ನಾಗರಿಕರ ಅನುಕೂಲ ಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಶಿಬಿರ ಏರ್ಪಡಿಸಲಾಗಿದೆ ಎಂದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ,ಹಿರಿಯ ನಾಗರಿಕರ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ವಿಶೇಷ ಅಭಿಯಾನ ಯೋಜನೆಯನ್ನು ಸರ್ಕಾರ ಘೋಷಿಸಿದೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಪಾಪಯ್ಯ,ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ.ಪ್ರದೀಪ್,ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾ ಜ್, ತಾಪಂ ಇಒ ವೈ.ರವಿಕುಮಾರ್,ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ ಮತ್ತಿತರರು ಇದ್ದರು.

ಹಿರಿಯ ನಾಗರಿಕರಿಗೆ ನೆರವಾಗಿ

ಪ್ರತಿಯೊಬ್ಬರು ನೇತ್ರದಾನ ಮಾಡಬಹುದು. ಕಣ್ಣಿನ ತೊಂದರೆ ಇರುವ ನೆರೆ- ಹೊರೆಯ ಹಿರಿಯ ನಾಗರಿಕರನ್ನು ಇಂಥ ಶಿಬಿರಗಳಿಗೆ ಕರೆದುಕೊಂಡು ಬಂದು ನೆರವಾಗಬೇಕು.

ಡಾ.ಪ್ರದೀಪ್,ನೇತ್ರ ತಜ್ಞ,ಜಿಲ್ಲಾಸ್ಪತ್ರೆ,ಚಿತ್ರದುರ್ಗ.

-----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net