ಕಣ್ಣುಗಳ ಸುರಕ್ಷತೆ ಕಡೆಗೆ ಇರಲಿ ಜಾಗೃತಿ

CTD DRISTI
Published on

ಚಿತ್ರದುರ್ಗ: ಜೀವನದಲ್ಲಿ ದೃಷ್ಟಿ ಬಹು ಮುಖ್ಯ. ಆದ್ದರಿಂದ ಕಣ್ಣುಗಳ ಸುರಕ್ಷತೆಗೆ ನಾವೆಲ್ಲರೂ ಹೆಚ್ಚಿನ ಆದ್ಯತೆ ಕೊಡಬೇಕಿದೆ ಎಂದು ಜಿಲ್ಲಾಸ್ಪತ್ರೆ ಹಿರಿಯ ನೇತ್ರ ತಜ್ಞೆ ಡಾ.ಐ.ಎಂ.ಶಿಲ್ಪಾ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಸರ್ಕಾರಿ ಬಿ.ಎಸ್‌ಸಿ ನಸಿರ್ಂಗ್ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ದೃಷ್ಟಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಶಿಶುಗಳಲ್ಲಿ ಅನೇಕ ಕಾರಣಗಳಿಂದ ದೃಷ್ಟಿಹೀನತೆ ಉಂಟಾಗುವ ಸಾಧ್ಯತೆಗಳಿರುತ್ತವೆ. ಯಾವುದೇ ನ್ಯೂನತೆಗಳನ್ನು ಶಿಶು ಜನಿಸಿದ 12 ವರ್ಷಗಳ ಒಳಗೆ ಸೂಕ್ತ ಚಿಕಿತ್ಸೆ ಮುಖಾಂತರ ಸರಿಪಡಿಸಬಹುದಾಗಿದೆ. ಮೊಬೈಲ್ ಅತಿಯಾದ ವೀಕ್ಷಣೆ ಮಕ್ಕಳಿಗೆ ಒಳ್ಳೆಯದಲ್ಲ ಎಂದರು.
ನೇತ್ರತಜ್ಞ ಡಾ.ಪ್ರದೀಪ್ ಮಾತನಾಡಿ, ಹಣ್ಣು, ತರಕಾರಿಗಳ ಹೆಚ್ಚಿನ ಸೇವನೆಯಿಂದ ದೃಷ್ಟಿ ಉತ್ತಮವಾಗಿರುತ್ತದೆ ಎಂದರು. ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಚಾರ‌್ಯೆ ಅನುಸೂಯಮ್ಮ, ನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ, ನೇತ್ರಾಧಿಕಾರಿ ಕೆ.ಸಿ.ರಾಮು, ಜಿಲ್ಲಾ ಮಾನಸಿಕ ರೋಗ ವಿಭಾಗದ ಕನ್ಸಲ್ಟೆಂಟ್ ಶ್ರೀಧರ್, ಜಿಲ್ಲಾ ಬ್ರೈನ್ ಹೆಲ್ತ್ ಕನ್ಸಲ್ಟೆಂಟ್ ಶರತ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net