ಕಣ್ಮನ ಸೆಳೆದ ಜೋಡೆತ್ತಿನ ಗಾಡಿ ಶರ್ಯತ್ತು

111
Published on

ಬೆಳಗಾವಿ: ಗೋಕಾಕ ನಗರದಲ್ಲಿ ನಡೆಯುತ್ತಿರುವ ಗ್ರಾಮದ ಮಹಾಲಕ್ಷಿ$್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ಭವ್ಯ ಜೋಡೆತ್ತಿನ ಗಾಡಿ ಓಡಿಸುವ ಸ್ಪರ್ಧೆ ನೋಡುಗರ ಗಮನ ಸೆಳೆಯಿತು.

ನಗರದ ಹೊರವಲಯದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗೆ ಕಾರ್ಮಿಕ ಮುಖಂಡ ಅಂಬಿರಾವ್​ ಪಾಟೀಲ ಚಾಲನೆ ನೀಡಿದರು. ಶರ್ಯತ್ತು ನೋಡಲು ಜನಸ್ತೋಮವೇ ನೆರೆದಿತ್ತು. ಸ್ಪರ್ಧೆಯಲ್ಲಿ ಪ್ರಥಮ 5 ಲಕ್ಷ ರೂ. ನಗದು ಬಹುಮಾನವನ್ನು ಯರಟ್ಟಿಯ ಅಜೀತ ದೇಸಾಯಿ, ದ್ವೀತಿಯ 3 ಲಕ್ಷ ರೂ. ಬಹುಮಾನವನ್ನು ನಿಖಿಲ್​ ದೇಸಾಯಿ ಪಡೆದರು.

ನಗರದ ಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಯುವ ಮುಖಂಡ ಅಮರನಾಥ ಜಾರಕಿಹೊಳಿ, ಟಿ.ಆರ್​.ಕಾಗಲ, ಅಶೋಕ ಪೂಜಾರಿ, ಜಾತ್ರಾ ಕಮಿಟಿಯ ಪ್ರಭು ಚೌವ್ಹಾಣ, ಅಡಿವೆಪ್ಪ ಕಿತ್ತೂರ, ದಸ್ತಗಿರ ಕೋತವಾಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net