

ಮದ್ದೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕದಲೂರು ಕೆ.ಎಂ.ಉದಯ್ ಅವರ ನಾಮಪತ್ರವನ್ನು ಅವರ ಪತ್ನಿ ವಿನುತಾ ಕೆ.ಎಂ.ಉದಯ್, ಸೋಮವಾರ ಸಾಂಕೇತಿಕವಾಗಿ ಸಲ್ಲಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚುನಾವಣಾಧಿಕಾರಿ ಆರ್.ನಾಗರಾಜು ಅವರಿಗೆ ನಾಮಪತ್ರ ಸಲ್ಲಿಸಲಾಯಿತು.
ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಪಕ್ಷ ಜನಪರವಾದ ಯೋಜನೆಗಳನ್ನು ಜಾರಿ ತರುವ ಮೂಲಕ ಎಲ್ಲ ವರ್ಗದವರಿಗೂ ಅನುಕೂಲ ಕಲ್ಪಿಸಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಜನರು ಕಾಂಗ್ರೆಸ್ ಪಕ್ಷಕ್ಕೆ ಅಶೀರ್ವಾದ ಮಾಡಲಿದ್ದಾರೆ ಎಂದು ವಿನುತಾ ಹೇಳಿದರು.
ಕದಲೂರು ಉದಯ್ ಅವರು, ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುವ ಮೂಲಕ ಕ್ಷೇತ್ರದಲ್ಲಿ ಮನೆ ಮಾತಾಗಿದ್ದಾರೆ. ಹೆಚ್ಚಿನ ಮಟ್ಟದಲ್ಲಿ ಜನಸೇವೆ ಮಾಡಬೇಕು ಎಂಬ ಉದ್ದೇಶದಿಂದ ಕ್ಷೇತ್ರದ ಜನರ ಒತ್ತಾಯ ಮೇರೆಗೆ ರಾಜಕೀಯಕ್ಕೆ ಬಂದಿದ್ದಾರೆ ಎಂದರು.
ಈ ವೇಳೆ ಸಾದರಳಯ್ಯ, ಹರೀಶ್‌ಬಾಬು, ಯತೀಶ್, ಹರೀಶ್ ಇತರರು ಇದ್ದರು.