ಕನಕ ಮೂರ್ತಿ ಸ್ಥಾಪನೆಗೆ ಆಗ್ರಹ

Santosh Joldapke
Published on

ಬೀದರ್: ನಗರದ ಶಿವನಗರದ ಕ್ಲಾಸಿಕ್ ಧಾಬಾ ಸಮೀಪ ನಾಲ್ಕು ರಸ್ತೆಗಳು ಕೂಡುವ ಸ್ಥಳದಲ್ಲಿ ಕನಕ ಮೂರ್ತಿ ಸ್ಥಾಪಿಸಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಆಗ್ರಹಿಸಿದ್ದಾರೆ.
15 ವರ್ಷಗಳ ಹಿಂದೆ ಇಲ್ಲಿ ಕನಕದಾಸರ ಮೂರ್ತಿ ಸ್ಥಾಪಿಸಲಾಗಿತ್ತು. ಆದರೆ, ನಗರಸಭೆ ಅಧಿಕಾರಿಗಳು ಅದನ್ನು ತೆರವುಗೊಳಿಸಿದ್ದರು ಎಂದು ತಿಳಿಸಿದ್ದಾರೆ.
ತೆಗೆದು ಹಾಕಿದ್ದ ಮೂರ್ತಿ ಸ್ಥಾಪನೆಗೆ ಒತ್ತಾಯಿಸಿ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಹಲವು ಬಾರಿ ಆಡಳಿತ ಹಾಗೂ ಚುನಾಯಿತ ಪ್ರತಿನಿಧಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವೆಂಬರ್ 11 ರಂದು ಕನಕದಾಸ ಜಯಂತಿ ಇದೆ. ಈ ಪ್ರಯುಕ್ತ ಕೂಡಲೇ ವೃತ್ತದಲ್ಲಿ ಕನಕದಾಸರ ಮೂರ್ತಿ ಸ್ಥಾಪಿಸಬೇಕು. ಇದೇ ಸ್ಥಳದಲ್ಲಿ ಕನಕದಾಸ ಜಯಂತಿ ಆಚರಣೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ವಾರದೊಳಗೆ ಮೂರ್ತಿ ಸ್ಥಾಪನೆಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net