

ಸಿರವಾರ: ಪಟ್ಟಣದಲ್ಲಿ ನ.18ರಂದು ಕನಕದಾಸರ ಜಯಂತಿಯನ್ನು ತಾಲೂಕು ಆಡಳಿತ ಹಾಗೂ ಹಾಲುಮತ ಸಮಾಜದ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಬೇಕು ಎಂದು ತಹಸೀಲ್ದಾರ ರವಿ ಎಸ್.ಅಂಗಡಿ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು . ತಹಸಿಲ್ ಕಚೇರಿಯಲ್ಲಿ ಕನಕದಾಸರ ಪೂಜೆ ನೆರವೇರಿಸಲಾಗುವುದು. ನಂತರ ಪಟ್ಟಣದ ಕನಕದಾಸ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಹಾಲುಮತ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಶಾಸಕ ಜಿ.ಹಂಪಯ್ಯ ನಾಯಕ ಭಾಗವಹಿಸಲಿದ್ದಾರೆ ಎಂದರು.