ಕನಕದಾಸರಿಂದ ಸಮಾನತೆಯ ಸಂದೇಶ

18 ckm 2
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕನಕದಾಸರ ಜಯಂತ್ಯುತ್ಸವ ನಡೆಸಲಾಯಿತು. ಎಂ.ಆರ್.ದೇವರಾಜ ಶೆಟ್ಟಿ, ರವೀಂದ್ರ ಬೆಳವಾಡಿ, ಕೆ.ಎಸ್.ಪುಷ್ಪರಾಜ್, ಕೋಟೆ ರಂಗನಾಥ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಕನಕದಾಸರು ಸಮಾನತೆಯ ಸಂದೇಶವನ್ನು ಜಗತ್ತಿಗೆ ಸಾರುವ ಮೂಲಕ ದಾಸಶ್ರೇಷ್ಠರಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ದಾಸಶ್ರೇಷ್ಟ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಸಂದರ್ಭದಲ್ಲಿ ಜನ್ಮ ತಾಳಿದ್ದ ಕನಕದಾಸರು ಸಮಾಜದಲ್ಲಿ ನೆಲೆಸಿರುವ ಜಾತಿ ವ್ಯವಸ್ಥೆ ವಿರುದ್ಧ ದೊಡ್ಡ ಹೋರಾಟ ನಡೆಸಿದರು. ಈ ಮೂಲಕ ಜಾತಿ ಮುಕ್ತ ಸಮಾನತೆ ಸಂದೇಶ ಸಾರುವ ಮೂಲಕ ದಾಸಶ್ರೇಷ್ಟರಾಗಿದ್ದಾರೆ ಎಂದು ಬಣ್ಣಿಸಿದರು.

ಪಕ್ಷದ ಹಿರಿಯ ಮುಖಂಡ ಹಂಪಾAಪುರ ಎಚ್.ಎಸ್.ಪುಟ್ಟೇಗೌಡ ಮಾತನಾಡಿ, ಕನಕದಾಸರು ಶ್ರೀಮಂತಿಕೆ ತ್ಯಾಗ ಮಾಡುವ ಮೂಲಕ ಸಮಾಜದ ಅನಿಷ್ಟ ಪದ್ಧತಿಗಳನ್ನು ತೊಲಗಿಸಲು ಬದುಕು ಮೀಸಲಿಟ್ಟಿದ್ದರು. ದೈವ ಭಕ್ತರಾಗಿದ್ದ ಕನಕದಾಸರು ದೇವರನ್ನೇ ಒಲಿಸಿಕೊಂಡರು. ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಸುಧಾರಣೆಗೆ ಹೋರಾಟ ನಡೆಸಿದ್ದಾರೆ. ಅವರ ಮಾರ್ಗದಲ್ಲಿ ನಡೆಯಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಸಮಾಜ ಸುಧಾರಕರನ್ನು ಆಯಾ ಜಾತಿಗೆ ಸೀಮಿತಗೊಳಿಸುವ ಮೂಲಕ ದೊಡ್ಡ ಅಪಮಾನ ಮಾಡುವ ಕಾರ್ಯ ನಡೆದಿದೆ. ಸಮಾಜ ಸುಧಾರಕರ ಜಯಂತಿ ಮತ್ತಿತರ ಕಾರ್ಯಕ್ರಮಗಳಲ್ಲಿ ಎಲ್ಲ ಜಾತಿಯವರು ಭಾಗವಹಿಸುವ ಮೂಲಕ ಅವರ ಸಂದೇಶ, ಸಿದ್ಧಾಂತಗಳನ್ನು ತಮ್ಮ ಬದುಕಿನಲ್ಲಿ ಅನುಷ್ಠಾನಕ್ಕೆ ತಂದುಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ, ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡಾದಲ್ಲಿ ಜನಿಸಿದ ಕನಕದಾಸರು ಸಮಾಜದ ವೈರುಧ್ಯಗಳ ವಿರುದ್ಧ ಹೋರಾಟ ನಡೆಸಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಪ್ರಧಾನ ಕೌಶಿಕ್, ಪ್ರಮುಖರಾದ ಕೋಟೆ ರಂಗನಾಥ್, ವೆಂಕಟೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net