ಆತ್ಮಹತ್ಯೆಗೀಡಾದ ರೈತನ ಕುಟುಂಬಕ್ಕೆ ಸಚಿವ ತಂಗಡಗಿಯಿಂದ ಪರಿಹಾರದ ಭರವಸೆ

VISIT
ಸಾಲಭಾದೆಯಿಂದ ಆತ್ಮಹತ್ಯೆಗೀಡಾದ ತಾಲೂಕಿನ ಕನಕಾಪುರ ಗ್ರಾಮದ ರೈತ ಕರೇಗೌಡ ಮಾ.ಪಾ. ಮನೆಗೆ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಹಸೀಲ್ದಾರ್ ಸಂಜಯ ಕಾಂಬ್ಳೆ, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲು, ತಾಪಂ ಇಒ ಚಂದ್ರಶೇಖರ ಕಂದಕೂರು, ಪಿಡಿಒ ಅಮರೇಶ ರಾಠೋಡ್, ಗ್ರಾಪಂ ಸದಸ್ಯ ಬಾಳನಗೌಡ ಇತರರಿದ್ದರು.
Published on

ಕನಕಗಿರಿ: ಸಾಲಬಾಧೆ ತಾಳಲಾರದೆ ಇತ್ತೀಚೆಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕನಕಾಪುರ ಗ್ರಾಮದ ರೈತ ಕರೇಗೌಡ ಮಾ.ಪಾ. ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ರೈತ ಕರೇಗೌಡನಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರನಿದ್ದು, ಈ ಪೈಕಿ ಇಬ್ಬರು ಮಕ್ಕಳಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಅವರ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಮತ್ತು ಸರ್ಕಾರಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು.

ನಂತರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಚಿವ ತಂಗಡಗಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ಗ್ರಾಮದಲ್ಲಿ ಕನಕ ಭವನ ನಿರ್ಮಾಣ, ಗ್ರಾಮದ ಹೊರವಲಯದಲ್ಲಿ ಕುರಿ ಹಾಗೂ ಜಾನುವಾರುಗಳಿಗೆ ಹೊಸ ಬೋರ್‌ವೆಲ್ ಕೊರೆಸುವುದಾಗಿ ಭರವಸೆ ನೀಡಿದರು.

ತಹಸೀಲ್ದಾರ್ ಸಂಜಯ ಕಾಂಬ್ಳೆ, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲು, ತಾಪಂ ಇಒ ಚಂದ್ರಶೇಖರ ಕಂದಕೂರು, ಪಿಡಿಒ ಅಮರೇಶ ರಾಠೋಡ್, ಗ್ರಾಪಂ ಸದಸ್ಯ ಬಾಳನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net