ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ

bkt-1-1b
Published on

ಬಾಗಲಕೋಟೆ: ಕನ್ನಡ ನಾಡಿನಲ್ಲಿ ಮಾತೃಭಾಷೆ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಇದಕ್ಕೆ ಪೂರಕವಾಗಿ ಎಲ್ಲಾ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಮುಂದಾಗಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಜನರು ಈ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಎಂದೆAದಿಗೂ ಆರಾಧಿಸುವರು. ಇಂತಹ ಸಹೃದಯಿ ಬಂಧುಗಳ ಅಪೇಕ್ಷೆಯಂತೆ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಇಲ್ಲಿನ ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸಧೃಡವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ಇಂದಿಗೆ 50 ವರ್ಷ ಪೂರ್ಣಗೊಂಡ ಈ ಶುಭ ಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬAಧಿಸಿದAತೆ ಮತ್ತು ಯುವ ಜನತೆಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲು ಸರಕಾರ ನಿರ್ಧರಿಸಿರುತ್ತದೆ ಎಂದು ಹೇಳಿದರು.

ನುಡಿದಂತೆ ನಡೆಯುವುದು ನಮ್ಮ ಸರಕಾರದ ಧ್ಯೇಯವಾಕ್ಯವಾಗಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲದಲ್ಲಿ ಸೆಪ್ಟೆಂಬರ 25 ರಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಪ್ರತಿ 15 ದಿನಗಳಿಗೊಮ್ಮೆ ತಾಲೂಕಾ ಹಂತದಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ, ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಇ-ಕಚೇರಿ ತಂತ್ರಾAಶ ಅನುಷ್ಟಾನಗೊಳಿಸಲಾಗಿದೆ. ನವೆಂಬರ 2 ರಿಂದ ಜಿಲ್ಲೆಯ ಎಲ್ಲ 9 ತಾಲೂಕಾ ತಹಶೀಲ್ದಾರ ಕಚೇರಿಗಳಲ್ಲಿಯೂ ಸಹ ಇ-ಕಚೇರಿ ತಂತ್ರಾAಶ ಅನುಷ್ಠಾನಗೊಳಿಸಾಗುತ್ತಿದೆ. ಇದರಿಂದ ಶೀಘ್ರ ಪಾರದರ್ಶಕ, ಪರಿಸರಸ್ನೇಹಿ ವಾತಾವರಣ ನಿರ್ಮಾಣವಾಗಲು ಸಹಾಯವಾಗುತ್ತದೆ. 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ 27294 ಎಕರೆ ಭೂಸ್ವಾಧೀನಪಡಿಸಿಕೊಂಡು ಪ್ರಗತಿ ಸಾಧಿಸಲಾಗಿದೆ. ಬಾಕಿ 11.06 ಲಕ್ಷ ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ. ಈ ಪೈಕಿ 43,734 ಎಕರೆ ಕ್ಷೇತ್ರಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿದ್ದು, ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಹೆಚ್.ವಾಯ್ ಮೇಟಿ, ಎಮ್ ಎಲ್ ಸಿ ಪಿ.ಹೆಚ್ ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಮ್. ಸಿ ಇ ಒ ಶಶಿಧರ ಕುರೇರ್, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸೇರಿ ಅನೇಕ ಹಿರಿಯ ಅಧಿಕಾರಿಗಳು ಮತ್ತು ಗಣ್ಯಮಾನ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net