ಕನ್ನಡ ರಥಕ್ಕೆ ಭವ್ಯ ಸ್ವಾಗತ

bkt-5-4
ಬಾಗಲಕೋಟೆ ನಗರಕ್ಕೆ ಭಾನುವಾರ ಸಂಜೆ ಆಗಮಿಸಿದ ಕನ್ನಡ ರಥಕ್ಕೆ ಸ್ವಾಗತ ಕೋರಲಾಯಿತು.
Published on

ಬಾಗಲಕೋಟೆ: ಹಾವೇರಿಯಲ್ಲಿ ಜ.೬ ರಿಂದ ನಡೆಯಲಿರುವ ೮೬ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ರಥಕ್ಕೆ ಭಾನುವಾರ ಸಂಜೆ ಕೋಟೆನಗರಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಲೋಕಾಪುರದಿಂದ ಬಾಗಲಕೋಟೆ ನಗರದ ವಿದ್ಯಾಗಿರಿಗೆ ಆಗಮಿಸಿದ ರಥಕ್ಕೆ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಭವ್ಯವಾಗಿ ಸ್ವಾಗತಿಸಿದರು. ನವನಗರ, ವಿದ್ಯಾಗಿರಿ, ಹಳೇ ಬಾಗಲಕೋಟೆ ನಗರದ ಪ್ರಮುಖ ಬೀದಿಗಳಲ್ಲಿ ರಥ ಸಂಚರಿಸಿ ಸಮ್ಮೇಳನ ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೇಲ್ಲಿಕೇರಿ, ಕೋಶಾಧ್ಯಕ್ಷ ಸಿ.ಎಂ.ಜೋಶಿ, ಪ್ರಧಾನ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ, ಬಾಗಲಕೋಟೆ ತಾಲೂಕು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಶಂಕರ ಹೂಗಾರ, ನೀಲಪ್ಪ ಗಾಣಿಗೇರ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net