ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ತೀರ್ಮಾನ

22 yelandur 02
ಯಳಂದೂರು ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿದರು.
Published on

ಯಳಂದೂರು: ತಾಲೂಕಿನಲ್ಲಿ ನವೆಂಬರ್‌ನಲ್ಲಿ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತೀರ್ಮಾನಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಳಗದಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿ, ನವೆಂಬರ್ ತಿಂಗಳಿಗಷ್ಟೇ ಸೀಮಿತವಾಗದೆ, ವರ್ಷಪೂರ್ತಿ ಕನ್ನಡ ಕಟ್ಟುವ ಕೆಲಸವಾಗಬೇಕು. ಕನ್ನಡ ನೆಲ, ಭಾಷೆ, ನದಿ, ಗಡಿ ಕುರಿತು ಹೋರಾಟ, ಅಭಿಮಾನ ಬೆಳೆಸಿಕೊಂಡು ಕನ್ನಡ ಉಳಿಸಿ ಬೆಳೆಸಬೇಕು. ರಾಜ್ಯೋತ್ಸವ ಅಂಗವಾಗಿ ಸಂಘದ ಪದಾಧಿಕಾರಿಗಳ ನೇಮಕ, ಆಟೋ, ಕಾರು ಚಾಲಕರು ಸೇರಿದಂತೆ ವಿವಿಧ ಕಲಾ ತಂಡಗಳಿಂದ ಅದ್ದೂರಿ ಮೆರವಣಿಗೆ, ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳು, ಕನ್ನಡಪರ ಹೋರಾಟಗಾರರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಭೀಮಪ್ಪ, ಮಾಜಿ ಸದಸ್ಯ ಜೆ.ಶ್ರೀನಿವಾಸ್, ಉಮಾಶಂಕರ್, ಗ್ರಾಪಂ ಮಾಜಿ ಅಧ್ಯಕ್ಷ ಡಿ.ಸಿಬಾಬು, ಕೆಸ್ತೂರು ಗುರು, ವಿಜಿ, ರಂಜನಿಕಾಂತ್, ಶಿವಣ್ಣ, ಲಿಂಗರಾಜುಮೂರ್ತಿ, ಹರೀಶ್‌ಬಾಬು, ವೆಂಕಟೇಶ್, ಸೋಮಣ್ಣ, ಮದ್ದೂರು ರಂಗಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net