ಕನ್ನಡ ರಾಜ್ಯೋತ್ಸವ ಆಚರಣೆ

Bharat Maata Samiti Kannada Rajyotsav Photo
Published on

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಜೈ ಭಾರತ ಮಾತಾ ಸೇವಾ ಸಮಿತಿಯ ತಾಲ್ಲೂಕು ಘಟಕದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಸದ್ಗುರುಪಾನಂದ ಸ್ವಾಮೀಜಿ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ಮಾತನಾಡಿ, ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಕನ್ನಡಿಗರು ಕಟಿಬದ್ಧರಾಗಿರಬೇಕು ಎಂದು ಹೇಳಿದರು.
ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಸಂವಹನಕ್ಕೆ ಮಾತೃಭಾಷೆ ಕನ್ನಡವನ್ನೇ ಬಳಸಬೇಕು ಎಂದು ತಿಳಿಸಿದರು.
ಪ್ರಮುಖರಾದ ಬಸವರಾಜ ಪಾಟೀಲ, ನಾಗೇಶ ಪಾಟೀಲ, ಪ್ರವೀಣ ಮರೆ ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net