ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಉದ್ಘಾಟನೆ ಇಂದು

Kannada-Sahitya-Parishat-KaSaPa
Published on

ಯಳಂದೂರು: ಪಟ್ಟಣದ ಸೊಸೈಟಿ ಬೀದಿಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಹಿಂಭಾಗದ ಕಟ್ಟಡದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಕಚೇರಿಯನ್ನು ನ. 1 ರಂದು ಬೆಳಗ್ಗೆ 10ಕ್ಕೆ ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಲಿದ್ದಾರೆ. ಪಟ್ಟಣದಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಕೊಠಡಿ ಇಲ್ಲದ ಕಾರಣ ತಾತ್ಕಾಲಿಕವಾಗಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಕಚೇರಿ ಕಾರ್ಯನಿರ್ವಹಿಸಲಿದೆ. ಕಸಾಪ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net