ಕನ್ನಡ ಸಾಹಿತ್ಯದ ಮೇರು ಬಿ.ಎಂ.ಶ್ರೀಕಂಠಯ್ಯ

21Rajesh8
Published on

ಚಾಮರಾಜನಗರ: ಕವಿಗಳಾದ ಬಿ.ಎಂ.ಶ್ರೀಕಂಠಯ್ಯ, ಡಿ.ವಿ.ಗುಂಡಪ್ಪ ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವವಾಗಿದ್ದು, ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಬಣ್ಣಿಸಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ, ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ 20ನೇ ದಿನದ ಕಾರ್ಯಕ್ರಮದಲ್ಲಿ ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯ ಅವರ ಕುರಿತು ಮಾತನಾಡಿದರು.

ಡಿ.ವಿ.ಗುಂಡಪ್ಪ ಅವರು ಆಧುನಿಕ ಕನ್ನಡ ಸಾಹಿತ್ಯದ ದಿಗ್ಗಜರು. ಪತ್ರಿಕೋದ್ಯಮದಲ್ಲಿ ತಮ್ಮ ವೃತ್ತಿ ಪ್ರಾರಂಭಿಸಿದರು. ಭಾರತ್ ಮತ್ತು ಕರ್ನಾಟಕ ಎಂಬ ಕನ್ನಡ ಪತ್ರಿಕೆ ಪ್ರಾರಂಭಿಸಿದರು. ಕನ್ನಡ ಸಾಹಿತ್ಯ ಅಪಾರ ಕೊಡುಗೆ ನೀಡಿದ್ದಾರೆ ಎಂದರು. ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿದರು. ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ಗೋಪಾಲ್, ತಮಿಳು ಸಂಘದ ಜಗದೀಶ್, ಬಸವರಾಜನಾಯಕ, ನಿಜಧ್ವನಿ ಗೋವಿಂದರಾಜು, ನಂಜುಂಡಶೆಟ್ಟಿ, ಮಹೇಶ್‌ಗೌಡ, ವೀರಭದ್ರ, ರಾಚಪ್ಪ, ಶಿವಣ್ಣ, ಶಿವಲಿಂಗಮೂರ್ತಿ, ಮಹದೇವಯ್ಯ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net