ಕನ್ನಡಕ್ಕಾಗಿ ನಾವೆಲ್ಲ ಒಂದಾಗಬೇಕಿದೆ

bkt-22-1
ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಾಗಲಕೋಟೆ ಜಿಲ್ಲಾ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಉದ್ಘಾಟಿಸಿದರು.
Published on

ಬಾಗಲಕೋಟೆ: ಕನ್ನಡ ಭಾಷೆ, ನಾಡು, ನುಡಿಗೆ ಕುಂದು ಬಂದಾಗ ನಾವೆಲ್ಲ ಒಂದಾಗಬೇಕಾಗಿದೆ. ಒಗ್ಗಟ್ಟಿನಿಂದ ಹೋರಾಟ ಮಾಡುವ ಮನೋಧೈರ್ಯವನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು.

ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಶನಿವಾರದಿಂದ ಎರಡು ದಿನಗಳ ವರೆಗೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಬಾಗಲಕೋಟೆ ಜಿಲ್ಲಾ ಹಾಗೂ ಬಾದಾಮಿ ತಾಲೂಕಾ ಘಟಕಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಬಾಗಲಕೋಟೆ ಜಿಲ್ಲಾ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಭವ್ಯವಾದ ಇತಿಹಾಸ ಪರಂಪರೆ ಇದೆ. ರನ್ನ, ಪಂಪ, ಬಸವಣ್ಣ, ಅಕ್ಕಮಹಾದೇವಿ ಹೀಗೆ ಅನೇಕರು ಬಳಸಿದ ಕನ್ನಡ ನಾಡು-ನುಡಿಗೆ, ನೆಲ-ಜಲಕ್ಕೆ ಅನೇಕ ರೀತಿಯಲ್ಲಿ ತೊಂದರೆಗಳು ಎದುರುಗೊಳ್ಳುತ್ತವೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಕೇವಲ ಸರ್ಕಾರವೇ ಮಾಡಬೇಕು ಎನ್ನುವ ತಾತ್ಸಾರ ಮನೋಭಾವನೆ ವ್ಯಕ್ತಪಡಿಸದೇ ಕನ್ನಡಿಗರಾದ ನಾವೆಲ್ಲ ಹೋರಾಟ ಮಾಡಬೇಕಿದೆ. ಕವಿಗಳು ಯಾರ ಹಂಗಿನಲ್ಲಿ ಇರುವುದಿಲ್ಲ. ಹಿಂದಿನ ಪರಂಪರೆಯನ್ನು ಗಮನಿಸಿದಾಗ ಬಹುತೇಕ ಸಾಹಿತಿಗಳು, ಕವಿಗಳು ಪ್ರಭುತ್ವವನ್ನು ವಿರೋಸುತ್ತಲೇ ಬಂದಿದ್ದಾರೆ ಎಂದರು.

ನೀರಬೂದಿಹಾಳದAತಹ ಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಇದೇ ಗ್ರಾಮದಲ್ಲಿ ಹುಟ್ಟಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಡಾ.ವೈ.ಎಂ.ಯಾಕೊಳ್ಳಿ ಅವರಿಗೆ ಸಮ್ಮೇಳನ ಸರ್ವಾಧ್ಯಕ್ಷತೆ ಗೌರವ ನೀಡಿರುವುದು ಖುಷಿ ವಿಚಾರವಾಗಿದೆ ಎಂದರು.

ಕಾ0ಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಹಿರಿಮೆ-ಗರಿಮೆ ಇದೆ. ಹಳೆಗನ್ನಡ ಸಾಹಿತ್ಯಕ್ಕೆ ಅನೇಕ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಕನ್ನಡ ಸಾಹಿತ್ಯ ಓದುವುದರಿಂದ, ಕೇಳುವುದರಿಂದ ಮನಸ್ಸು ಮಧುರಗೊಳ್ಳುತ್ತದೆ ಎಂದು ತಿಳಿಸಿದರು.

ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ತಾತಾಸಾಹೇಬ ಬಾಂಗಿ, ಸಮ್ಮೇಳನಾಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಜಿಲ್ಲಾಽಕಾರಿ ಜಾನಕಿ ಕೆ.ಎಂ. ಮಾತನಾಡಿದರು. ಬೀಳಗಿ ಶಾಸಕ ಜೆ.ಟಿ.ಪಾಟೀಲ,ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಕರ್ನಾಟಕ ಸಾಹಿತ್ಯ ಆಕಾಡೆಮಿ ಸದಸ್ಯ ಮಹಾದೇವ ಬಸರಕೋಡ, ಪ್ರೇಮಾ ಯಾಕೊಳ್ಳಿ, ರಾಮಲಿಂಗೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಖೋತ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಡಾ.ಸಾಗರ ತೆಕ್ಕೆನ್ನವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net