ಕನ್ನಡದ ಕಂಪು ಪಸರಿಸಿದ ವಿದ್ಯಾರ್ಥಿಗಳು

28-pnp 1
Published on

ಪಾಂಡವಪುರ: ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕು ಆಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನೂರಾರು ವಿದ್ಯಾರ್ಥಿಗಳು ನಾಡಿನ ದಿಗ್ಗಜ ಕವಿಗಳ ರಚನೆಯ ಕನ್ನಡದ ಕಂಪನ್ನು ಪಸರಿಸುವ ಹಾಡುಗಳನ್ನು ಸಾಮೂಹಿಕವಾಗಿ ಹಾಡಿದರು.

ಪಟ್ಟಣದ ತಾಲೂಕು ಕಚೇರಿ ಮುಂಭಾಗ ಆಯೋಜಿಸಿದ್ದ ಸಮಾರಂಭದಲ್ಲಿ ಫ್ರೆಂಚ್‌ರಾಕ್ಸ್ ಶತಮಾನ ಶಾಲೆ, ಸರ್ಕಾರಿ ಪ್ರೌಢಶಾಲೆ, ಬಿಜಿಎಸ್, ಬಾಲಕಿಯರ ಪ್ರೌಢಶಾಲೆ, ಬಡ್ಸ್ ಫೌಂಡೇಷನ್ ಸೇರಿದಂತೆ ವಿವಿಧ ಶಾಲೆಗಳ ಮೂರು ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಕವಿ ಕುವೆಂಪು ರಚಿತ ಜಯ ಭಾರತ ಜನನೀಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ , ಹುಯಿಲಗೋಳ ನಾರಾಯಣರಾವ್ ಅವರ ಉದಯವಾಗಲಿ ಚೆಲುವ ಕನ್ನಡ ನಾಡು, ಚನ್ನವೀರ ಕಣವಿ ರಚಿತ ವಿಶ್ವ ವಿನೂತನ ವಿದ್ಯಾಚೇತನ, ಕರ್ಕಿ ಅವರ ಹಚ್ಚೇವು ಕನ್ನಡದ ದೀಪ ಮತ್ತು ಹಂಸಲೇಖ ಸಾಹಿತ್ಯ ಹಾಗೂ ಡಾ.ರಾಜ್‌ಕುಮಾರ್ ಹಾಡಿರುವ ಹುಟ್ಟಿದರೆ ಕನ್ನಡ ನಾಡಲೇ ಹುಟ್ಟಬೇಕು ಗೀತೆಗಳನ್ನು ಶುಶ್ರಾವ್ಯವಾಗಿ ಹಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net