ಕಪ್ಪಡಿ ರಾಚಪ್ಪಾಜಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಿರಿ: ಶ್ರೀ ದಯಾನಂದ ಸ್ವಾಮೀಜಿ ಆಗ್ರಹ

Published on

ಮೈಸೂರು: ಕೆ.ಆರ್.ನಗರ ತಾಲೂಕಿನ ಕಪ್ಪಡಿ ರಾಚಪ್ಪಾಜಿ ಜಾತ್ರೆ ಪ್ರಾಣಿ ಬಲಿ ತಡೆಯಬೇಕು ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಆಗ್ರಹಿಸಿದರು.

ಈಗಾಗಲೇ ಆರಂಭಗೊಂಡಿರುವ ಜಾತ್ರೆಯು ಯುಗಾದಿವರೆಗೆ ಇರಲಿದೆ. ಆದರೆ ಇಲ್ಲಿಗೆ ಆಗಮಿಸುವ ಭಕ್ತಾದಿಗಳು ದೇವರು ಮತ್ತು ಧರ್ಮದ ಹೆಸರಿನಲ್ಲಿ ಹರಕೆಯ ರೂಪದಲ್ಲಿ ಆಡು, ಕುರಿ, ಕೋಳಿ ಮೊದಲಾದ ಪ್ರಾಣಿಗಳನ್ನು ಬಲಿಗೊಡುವುದು ನಡೆದಿದೆ.

ಹೀಗಾಗಿ ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ತಡೆ ಹಾಕಬೇಕೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪ್ರಾಣಿಬಲಿ ಶಿಕ್ಷಾರ್ಹ ಅಪರಾಧವೂ ಆಗಿದೆ. ಆದ್ದರಿಂದ ಕಾನೂನು ಮತ್ತು ಹೈಕೋರ್ಟ್ ಆದೇಶದ ಅಡಿಯಲ್ಲಿ ಕಪ್ಪಡಿಯಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದರು.

ಪ್ರಾಣಿ ಬಲಿಯು ಅನಾಗರಿಕ, ಅಂಧಶ್ರದ್ಧೆ, ಪರಿಸರ ಮಾಲಿನ್ಯಕಾರಕ, ಕಾನೂನು ಮತ್ತು ಧರ್ಮ ವಿರೋಧಿಯಾಗಿದೆ. ಹೀಗಾಗಿ ಭಕ್ತಾದಿಗಳು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಸಾತ್ವಿಕ ಪೂಜೆ ಸಲ್ಲಿಸಬೇಕು ಎಂದೂ ವಿನಂತಿಸಿದರು.

ಚಂಪಾಲಾಲ್ ಖಾದಿಯಾ, ಮಹೇಂದ್ರ ಕುಮಾರ್ ಲೋಡಾ, ಬಾದ್ಮಲ್ ಬಾಗ್ಮಾರ್, ಕೈಲಾಶ್ ಚಂದ್ ಜೈನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net