ಕಬಡ್ಡಿ ಪಂದ್ಯಾವಳಿಯಲ್ಲಿ ಕೆಸ್ತೂರು ತಂಡ ಪ್ರಥಮ

Oplus_0
Oplus_0
Published on

ಯಳಂದೂರು: ಚಾಮರಾಜನಗರದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಕೆಸ್ತೂರು ಗ್ರಾಮದ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮರಾಜನಗರದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಚಾಮರಾಜನಗರ ತಾಲೂಕಿನ ಅಮಚವಾಡಿ ತಂಡದ ವಿರುದ್ಧ ಜಯಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಸಿದ್ದಸ್ವಾಮಿ, ಸಿದ್ದಶೆಟ್ಟಿ, ಕಿರಣ್‌ಕುಮಾರ್, ಪ್ರವೀಣ್‌ನಾಯಕ, ಮಹೇಶ್ ಆಟಗಾರರನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net