ಕಬ್ಬಳಿ ಗ್ರಾಪಂಗೆ ಸುಮಾ ಅಧ್ಯಕ್ಷೆ

24 HRS 01
ಕಬ್ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಸುಮಾ ಹಾಗೂ ರತ್ನಾ ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು.
Published on

ಹಿರೀಸಾವೆ: ಹೋಬಳಿಯ ಕಬ್ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸುಮಾ ಹಾಗೂ ಉಪಾಧ್ಯಕ್ಷೆಯಾಗಿ ರತ್ನಾ ಕುಮಾರಸ್ವಾಮಿ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಸುಮಾ ಹಾಗೂ ರತ್ನಾ ಕುಮಾರಸ್ವಾಮಿ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.

ಪಂಚಾಯಿತಿಯಲ್ಲಿ 14 ಸದಸ್ಯರಿದ್ದು ಚುನಾವಣೆ ಪ್ರಕ್ರಿಯೆ ವೇಳೆ ಎಲ್ಲ ಸದಸ್ಯರು ಹಾಜರಿದ್ದರು. ಸಹಕಾರ ಇಲಾಖೆಯ ರಾಚಪ್ಪ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ನೂತನ ಅಧ್ಯಕ್ಷೆ ಸುಮಾ ಮಾತನಾಡಿ, ಶಾಸಕ ಸಿ.ಎನ್.ಬಾಲಕೃಷ್ಣ ಅವರ ಮಾರ್ಗದರ್ಶನದೊಂದಿಗೆ ಎಲ್ಲ ಸದಸ್ಯರ ಸಹಕಾರ ಪಡೆದು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ನೀಡಿದರೆ ಮುಂದಿನ ಸಭೆಯಲ್ಲಿ ಚರ್ಚಿಸಿ ಕ್ರಿಯಾಯೋಜನೆ ಸಿದ್ಧಪಡಿಸಲು ಅನುಕೂಲವಾಗಲಿದೆ ಎಂದರು.

ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯನ್ನು ಗ್ರಾಪಂ ವತಿಯಿಂದ ಅಭಿನಂದಿಸಲಾಯಿತು. ಮಾಜಿ ಅಧ್ಯಕ್ಷರಾದ ಬಿಳಿಕೆರೆ ರಂಗೇಗೌಡ, ಶಿವನಂಜೇಗೌಡ, ರಾಜೇಗೌಡ, ಕೆ.ಪೃಥ್ವಿಕುಮಾರ್, ಟಿ.ಮಂಜೇಗೌಡ, ಸದಸ್ಯರಾದ ಮಮತಾ, ನಂಜಮ್ಮ, ಕವಿತಾ, ಮಂಗಳಮ್ಮ, ಜಯಲಕ್ಷ್ಮಮ್ಮ, ಬಸವರಾಜ್, ಚಂದ್ರೇಶ್, ಪಿಡಿಒ ಕಿರಣ್, ಕಾರ್ಯದರ್ಶಿ ಹನುಮೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net