

ಕೆ.ಎಂ.ದೊಡ್ಡಿ: ಇಲ್ಲಿನ ಚಾಂಶುಗರ್ಸ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕಾರ್ಖಾನೆಯ ಉಪಾಧ್ಯಕ್ಷ ಆರ್. ಮಣಿ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ 10 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ನಿಗದಿಪಡಿಸುವ ದರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಭರವಸೆ ನೀಡಿದರು.
ಈ ಬಾರಿ ಅವಧಿಗೆ ಮೊದಲು ಕಾರ್ಖಾನೆ ಆರಂಭಿಸಿದ್ದು, ಹೊಸ ಯಂತ್ರೋಪಕರಣದಿಂದ ದಿನಕ್ಕೆ 5500 ಟನ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರುವುದಾಗಿ ವಿವರಿಸಿದರು.
ಕಾರ್ಖಾನೆಗೆ ಮೊದಲು ಕಬ್ಬು ತುಂಬಿಕೊಂಡು ಬಂದಂತಹ ಎತ್ತಿನಗಾಡಿ, ಟ್ರಾೃಕ್ಟರ್, ಲಾರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸೆಂಥಿಲ್ ಕುಮಾರ್, ವ್ಯವಸ್ಥಾಪಕ ಎಂ.ರವಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮಹದೇವಪ್ರಭು, ಮಣಿಮಾರನ್, ಕಾರ್ಖಾನೆ ಅಧಿಕಾರಿಗಳಾದ ನಿತೀಶ್, ನಿಂಗಯ್ಯ ಇತರರಿದ್ದರು.
ಚಾಂಶುಗರ್ಸ್ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಕಾರ್ಖಾನೆಯ ಸಹಾಯಕ ಉಪಾಧ್ಯಕ್ಷ ಆರ್.ಮಣಿ ಚಾಲನೆ ನೀಡಿದರು.