ಯಳಂದೂರು: ತಾಲೂಕಿನ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ಶುಕ್ರವಾರ ಸಭೆ ನಡೆಯಿತು. ಕುಂತೂರುನಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ತಾಲೂಕಿನಲ್ಲಿ ಅವಧಿ ಮುಗಿದಿರುವ ಕಬ್ಬುಗಳನ್ನು ಕಟಾವು ಮಾಡದೆ ವಿಳಂಬ ಮಾಡುತ್ತಿದ್ದು, ಇದರಿಂದ ಕಬ್ಬುನ ಬೆಳೆಗಾರರಿಗೆ ತೊಂದರೆಯಾಗುತ್ತಿದೆ.
ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಕಬ್ಬು ಕಟಾವು ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಭವನ ಮುಂಭಾಗ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಮುಖಂಡರಾದ ಸಿದ್ದಲಿಂಗಸ್ವಾಮಿ, ಸೇರಿದಂತೆ ಇತರರಿದ್ದರು.