ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ

PH 01
Published on

ಅಫಜಲಪುರ: ಕಬ್ಬು ಬೆಳೆಗಾರರ ಹೋರಾಟಕ್ಕೆ ಶಾಸಕ ಎಂ.ವೈ.ಪಾಟೀಲ್ ಅವರ ಬೆಂಬಲವಿದ್ದು, ರೈತರ ಬೇಡಿಕೆ ಬಗ್ಗೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಕಾರ್ಖಾನೆ ಆಡಳಿತ ಮಂಡಳಿಯೊAದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರುಣಕುಮಾರ ಪಾಟೀಲ್ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದಿAದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ ಎರಡು ದಿನ ಪೂರ್ಣಗೊಳಿಸಿದ್ದು, ಧರಣಿಯಲ್ಲಿ ಅವರು ಮಾತನಾಡಿ, ರೈತರು ಕಷ್ಟಪಟ್ಟು ಬೆಳೆದ ಬೆಲೆಗೆ ಯೋಗ್ಯ ಬೆಲೆ ಸಿಗಬೇಕು. ಕಬ್ಬಿನಲ್ಲಿನ ಸಕ್ಕರೆ ಅಂಶ ಪರಿಗಣಿಸಿ ಬೆಲೆ ನಿಗದಿ ಮಾಡಬೇಕು. ಭೀಮಾ ಏತ ನೀರಾವರಿ ಕಾಲುವೆಗಳಲ್ಲಿ ಹೂಳು ಎತ್ತಲು 2 ಕೋಟಿ ರೂ. ಅನುದಾನ ಬಂದಿದೆ. ಆದರೆ ಇದು ಸಾಕಾಗುತ್ತಿಲ್ಲ. ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು. ನೀರಾವರಿ ನಿಗಮದ ಎಂಡಿ ಅವರು ಭೀಮಾ ಕಾಲುವೆ ಹಾಗೂ ಕೆರೆ ತುಂಬುವ ಕಾಮಗಾರಿ ಪರಿಶೀಲಿಸಿದ ನಂತರ ಕೆಲಸ ವೇಗ ಪಡೆದಿದೆ ಎಂದು ತಿಳಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀಮಂತ ಬಿರಾದಾರ ಮಾತನಾಡಿ, ಜಿ¯್ಲÁ ಮಟ್ಟದ ಅಧಿಕಾರಿಗಳು ಹಾಗೂ ಕಾರ್ಖಾನೆಯ ಪ್ರಮುಖರು ಸೇರಿಕೊಂಡು ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯಲ್ಲ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯP್ಷÀ ರಮೇಶ ಪೂಜಾರಿ, ಪ್ರಮುಖರಾದ ಮೋಶಿನ್ ಪಟೇಲï, ಸಿದ್ದರಾಮ ದಣ್ಣೂರ, ರಾಜುಗೌಡ ಪಾಟೀಲ್, ಜೆ.ಎಂ.ಕೊರಬು, ಶಾಂತಾ ಘಂಟೆ, ಬಸಮ್ಮ ಗುತ್ತೇದಾರ್, ಬಸವ ಸೋಮಜಾಳ, ಗುರು ಚಾಂದಕವಟೆ, ಮನೋಹರ ರಾಠೋಡ್, ಸಿದ್ದಪ್ಪ ಗುಡೇದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net