ಕಮಲನಗರದಲ್ಲಿ ಪಥ ಸಂಚಲನ

23kmr2
Published on

ಕಮಲನಗರ: ಗಣೇಶ ಹಬ್ಬ, ಈದ್ ಮಿಲಾದ್ ನಿಮಿತ್ತ ಶುಕ್ರವಾರ ಪಥ ಸಂಚಲನ ನಡೆಯಿತು. ಹಬ್ಬದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಕೋಮು ಗಲಭೆ ತಡೆ, ಶಾಂತಿ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಪಥಸಂಚಲನ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನೂರಾರು ಪೊಲೀಸರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರಸಿಂಗ್ ಠಾಕೂರ, ಪಿಎಸ್‌ಐ ಚಂದ್ರಶೇಖರ ನಿರ್ಣೆ, ಪಿಎಸ್‌ಐ ಉದ್ದಂಡಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net