ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

01Rajesh3
Published on

ಚಾಮರಾಜನಗರ: ತಮಿಳು ನಟ ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಸಂಘಟನೆಗಳ ಸದಸ್ಯರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ರಸ್ತೆ ಸಂಚಾರ ತಡೆ ನಡೆಸಿದ ಪ್ರತಿಭಟನಾಕಾರರು, ಕಮಲ್ ಹಾಸನ್ ಭಾವಚಿತ್ರಕ್ಕೆ ಪೊರಕೆ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರ ಬಿಡುಗಡೆಯಾಗಬಾರದು ಎಂದು ಆಗ್ರಹಿಸಿದರು.

ಕನ್ನಡ ಪರ ಸಂಘಟನೆಗಳ ಮುಖಂಡ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಮಲ್ ಹಾಸನ್‌ಗೆ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯ ಬಗ್ಗೆ ಗೊತ್ತಿಲ್ಲ. ಕನ್ನಡದ ಬಗ್ಗೆ ಎಳ್ಳಷ್ಟೂ ಗೊತ್ತಿಲ್ಲದ ಕಮಲ್ ಹಾಸನ್‌ಗೆ ತಿಳಿವಳಿಕೆ ಇಲ್ಲ. ಕನ್ನಡ ಪರ ಸಂಘಟನೆಗಳು ಮತ್ತು ರಾಜಕಾರಣಿಗಳು ಆಕ್ರೋಶ ವ್ಯಕ್ತಪಡಿಸಿದರೂ ಕಮಲ್ ಹಾಸನ್ ಕ್ಷಮೆ ಕೇಳದೆ ಉದ್ಧಟತನ ತೋರಿರುವುದು ಸರಿಯಲ್ಲ. ಎಲ್ಲಿಯವರೆಗೂ ಕ್ಷಮೆ ಕೇಳುವುದಿಲ್ಲವೋ ಅಲ್ಲಿಯವರೆಗೂ ಅವರ ಚಿತ್ರಗಳನ್ನು ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಹೇಳಿದರು. ಡಾ.ಪರಮೇಶ್ವರಪ್ಪ, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡ ರಾಜು, ನಂಜುಂಡ, ರೈತ ಮುಖಂಡ ಹಾಲಿನ ನಾಗರಾಜು, ಶಿವು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net