ಹೊಸಪೇಟೆ: ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ೩ ದಿನಗಳ ಕಮ್ಮಟ ನಡೆಯುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಅ.೦೮ ಕೊನೆಯ ದಿನವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಯಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.