

ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಪಟ್ಟಣದ ಮುಖ್ಯ ರಸ್ತೆಯ ಬದಿಯಲ್ಲಿನ ಸ್ವಾಮಿಹಳ್ಳಕ್ಕೆ ಮಂಗಳವಾರ ತಡರಾತ್ರಿ ಕಾರೊಂದು ಮಗುಚಿ ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರಿನ 6 ಸ್ನೇಹಿತರು ಕಾರಿನಲ್ಲಿ ತಡರಾತ್ರಿ ಮ.ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ವಾಮಿಹಳ್ಳಕ್ಕೆ ಮಗುಚಿ ಬಿದ್ದಿದೆ ಎನ್ನಲಾಗಿದೆ. ಪರಿಣಾಮ ತೇಜಸ್ಸು ಎಂಬುವರು ತೀವ್ರವಾಗಿ ಗಾಯಗೊಂಡಿದ್ದರೆ,
ಕಾರಿನಲ್ಲಿದ್ದ ಇನ್ನು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಮೀಪದ ಕಾಮಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿಲ್ಲ.