ಕ್ರೀಡಾಂಗಣದಲ್ಲಿ ಸಿದ್ಧತೆ ಕಾರ್ಯ

HYR cmc 10
Published on

ಹಿರಿಯೂರು: ತಾಲೂಕು ಕ್ರೀಡಾಂಗಣದಲ್ಲಿ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮ ನಗರದ ಹೃದಯ ಭಾಗದಲ್ಲಿರುವ ನೆಹರು ಮೈದಾನಕ್ಕೆ ಶಿಫ್ಟ್ ಆಗಲಿದೆ.

ಪಾಳು ಬಿದ್ದಿದ್ದ ತಾಲೂಕು ಕ್ರೀಡಾಂಗಣಕ್ಕೆ ಅಭಿವೃದ್ಧಿ ಸ್ಪರ್ಶ ನೀಡಿ, ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲು 2018ರಲ್ಲಿ ಶಾಸಕಿ ಪೂರ್ಣಿಮಾ ಚಾಲನೆ ನೀಡಿದ್ದರು.

ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹಬ್ಬ ಆಚರಿಸಲು ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ತಾಲೂಕಿನಲ್ಲಿ ಕೈಗೊಂಡಿದ್ದ ಕೆಲ ನಿರ್ಣಯಗಳನ್ನು ಸಚಿವ ಸಚಿವ ಡಿ.ಸುಧಾಕರ್ ಅವರು ಬದಲಾವಣೆಗೆ ಮುನ್ನುಡಿ ಬರೆದಿದ್ದು, ಈ ಬಾರಿ ಅದ್ದೂರಿ ಸ್ವಾತಂತ್ರ್ಯೋತ್ಸವ ಆಚರಣಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿನ ನಿರ್ಣಯದಂತೆ ಈ ಬಾರಿ ನಗರದ ಹೃದಯ ಭಾಗದಲ್ಲಿರುವ ನೆಹರು ಮೈದಾನದಲ್ಲಿ ಆಚರಿಸಲು ನಗರಸಭೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದ್ದೂರಿ, ಸಂಭ್ರಮದಿಂದ ಆಚರಣೆ ಆಗಬೇಕು ಎಂದು ಸಚಿವರು ಸೂಚಿಸಿದ್ದಾರೆ ಎನ್ನುತ್ತಾರೆ ಪೌರಾಯುಕ್ತ ಎಚ್.ಮಹಾಂತೇಶ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net