ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ

7rbk meeting
ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು. ತಹಸೀಲ್ದಾರ್ ಗಿರೀಶ ಸ್ವಾದಿ, ತಾಪಂ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಬಟ್ಟಿಹಾಳ ಇದ್ದರು.
Published on


ಬಕವಿ/ಬನಹಟ್ಟಿ: ಪ್ರಸಕ್ತ ವರ್ಷದ ಸ್ವಾತಂತ್ರೊೃೀತ್ಸವವನ್ನು ನಾವೆಲ್ಲರೂ ಸಂಭ್ರಮ- ಸಡಗರದಿಂದ ಆಚರಿಸುವ ನಿಟ್ಟಿನಲ್ಲಿ ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರತಿಯೊಬ್ಬರೂ ಆ.15 ರಂದು ಸ್ವಾತಂತ್ರೋತ್ಸವ ಹಬ್ಬದಲ್ಲಿ ಭಾಗವಹಿಸಬೇಕೆಂದು ಶಾಸಕ ಸಿದ್ದು ಸವದಿ ತಿಳಿಸಿದರು.

ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಸಂಘ-ಸಂಸ್ಥೆಗಳು ಮತ್ತು ವ್ಯಾಪಾರಸ್ಥರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವಂತಾಗಬೇಕು. ಪ್ರತಿಯೊಬ್ಬರನ್ನು ಆಹ್ವಾನಿಸಿ ಈ ಬಾರಿ ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ನೀಡಬೇಕೆಂದು ತಿಳಿಸಿದರು.

ತಹಸೀಲ್ದಾರ್ ಗಿರೀಶ ಸ್ವಾದಿ ಮಾತನಾಡಿ, ತಾಲೂಕಿನಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ, ಬಳಕೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಧ್ವಜ ಮಾರಾಟಗಾರರಿಗೆ ತಿಳಿವಳಿಕೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತ್ತಿದೆ. ಆದಾಗ್ಯೂ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ತಾಲೂಕಿನ ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು ಎಂದರು.

ತಾಪಂ ಇಒ ಸಿದ್ದಪ್ಪ ಬಟ್ಟಿಹಾಳ, ಉಪತಹಸೀಲ್ದಾರ್ ಎಸ್.ಎಲ್. ಕಾಗಿಯವರ, ಪೌರಾಯುಕ್ತ ಜಗಧೀಶ ಈಟಿ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಸದಾಶಿವ ಕುಂಬಾರ, ಬಿಇಒ ಎ. ಕೆ. ಬಸನ್ನವರ, ಬಿ.ಎಂ. ಹಳೇಮನಿ, ಪ್ರಶಾಂತ ಹೊಸಮನಿ, ಮಲ್ಲಿಕಾರ್ಜುನ ಗಡೆನ್ನವರ, ಅಪ್ಪಾಜಿ ಹೂಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net