ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂಡ್ಲೂರು ಝೀಯಾ ಪಬ್ಲಿಕ್ ಸ್ಕೂಲ್ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕುಮಟ್ಟದ ಕರಾಟೆ ಪಂದ್ಯಾಟದಲ್ಲಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಬಾಲಕಿಯರ 44 ಕೆಜಿ ವಿಭಾಗದಲ್ಲಿ ಮಂಜುಶ್ರೀ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ 82 ಕೆಜಿ ವಿಭಾಗದಲ್ಲಿ ಬಹಲಿಕ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆ ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಹೊಳ್ಳ, ಉದಯ ಮಡಿವಾಳ ಎಂ. ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.