

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾಗಿ ಡಾ.ಸಿ.ಎಸ್.ಆನಂದ್‌ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಸ್ಥಾನದಲ್ಲಿದ್ದ ಪ್ರೊ.ಎಚ್.ವಿಶ್ವನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ ಗೆಹಲೋತ್ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಕರಾಮುವಿ ಕಚೇರಿಯಲ್ಲಿ ಅಧಿಕಾರವನ್ನು ವಹಿಸಿಕೊಂಡರು.
ಹಿಂದೆ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಅನ್ವಯಿಕ ವಿಜ್ಞಾನದ ಪ್ರಾಧ್ಯಾಪಕರಾಗಿದ್ದರು. ಇವರು ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರ ಅಳಿಯ.
ಇತ್ತೀಚೆಗೆ ಕರಾಮುವಿ ಕುಲಸಚಿವರಾಗಿದ್ದ ಪ್ರೊ.ಕೆ.ಬಿ.ಪ್ರವೀಣ್ ಅವರನ್ನು ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್.ಕೆ.ನವೀನ್‌ಕುಮಾರ್ ಅವರನ್ನು ನಿಯೋಜಿಸಲಾಗಿತ್ತು. ಇದರ ಬೆನ್ನಲೇ ಪರೀಕ್ಷಾಂಗ ಕುಲಸಚಿವರನ್ನೂ ಬದಲಾಯಿಸಲಾಗಿದೆ