ಕರಾಳ ಆಯವ್ಯಯ

CTD B.E.JAGADISH--005
Published on

ಚಿತ್ರದುರ್ಗ: ಕೇಂದ್ರ ಬಜೆಟ್ ಕರ್ನಾಟಕದ ಪಾಲಿಗೆ ಕರಾಳ ಆಯವ್ಯಯವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ದೂರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅನ್ಯಾಯ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಉಳಿಸಿಕೊಳ್ಳಲು ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದಾರೆ. ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ನಿರ್ಲಕ್ಷ್ಯಸಲಾಗಿದ್ದು, ಇದೊಂದು ನಿರಾಶಾದಾಯಕ, ಜನವಿರೋಧಿ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net