ಕರಿಯಮ್ಮ ದೇವಿ ಕಾರ್ತಿಕೋತ್ಸವ 27, 28ಕ್ಕೆ

Kariyamma Devi
Published on

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಶಕ್ತಿದೇವತೆ ಕರಿಯಮ್ಮ ದೇವಿ, ಆಂಜನೇಯ ಸ್ವಾಮಿಯ ಕಡೇ ಕಾರ್ತಿಕೋತ್ಸವ ಎರಡು ದಿನ ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ.

ಡಿ. 27ರಂದು ಸಂಜೆ 7ಕ್ಕೆ ದೇವಿಯ ಮೂರ್ತಿಗೆ ಅಭಿಷೇಕ, ಮಹಾಮಂಗಳಾರತಿ, ದೀಪೋತ್ಸವ ನೆರವೇರಿದ ನಂತರ ಅನ್ನಸಂತರ್ಪಣೆ ಆಯೋಜಿಸಲಾಗಿದೆ.

28ರಂದು ಆಂಜನೇಯ ಸ್ವಾಮಿಯ ಕಾರ್ತಿಕೋತ್ಸವ ಏರ್ಪಡಿಸಿದ್ದು, ವೀರಗಾಸೆ ಸೇರಿ ಜನಪದ ಕಲಾತಂಡಗಳೊಂದಿಗೆ ಹೂವಿನ ಪಲ್ಲಕ್ಕಿ ಮಹೋತ್ಸವವೂ ಗ್ರಾಮದ ರಾಜಬೀದಿಗಳಲ್ಲಿ ಸಂಚರಿಸಲಿದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ಕಾರ್ಯಕ್ರಮ ಸಂಪನ್ನಗೊಳಿಸಬೇಕು ಎಂದು ದೇಗುಲ ಸಮಿತಿ, ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net