

ಹಾಸನ : ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ಸೋಮನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ಕರು ಮೇಲೆ ಚಿರತೆ ದಾಳಿ ನಡೆಸಿ, ಕೊಂದು ಹಾಕಿದೆ. ಗ್ರಾಮದ ಅಬ್ದುಲ್ ಅಭಿ ಎಂಬುವರು ತಮ್ಮ ಮನೆಯ ಹಿಂದಿನ ಶೆಡ್‌ನಲ್ಲಿ ಹಸು ಮತ್ತು ಕರುಗಳನ್ನು ಕಟ್ಟಿಹಾಕಿದ್ದರು. ಗುರುವಾರ ಬೆಳಗ್ಗೆ ಶೆಡ್ ಒಳಗೆ ನುಗ್ಗಿರುವ ಚಿರತೆ ಕರು ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಹಾವಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಬೋನು ಇರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.