ಕರೊನಾ ತಡೆಗೆ ಇನ್ನಷ್ಟು ಬಿಗಿ ಕ್ರಮ ಅವಶ್ಯ

20 BGV manju 8_Web
ಚನ್ನಮ್ಮಕಿತ್ತೂರಿನಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿದರು. ಶಾಸಕ ಮಹಾಂತೇಶ ದೊಡಗೌಡರ, ಎಸಿ ಶಿವಾನಂದ ಭಜಂತ್ರಿ ಇತರರು ಇದ್ದರು.
Published on

ಚನ್ನಮ್ಮ ಕಿತ್ತೂರು : ಪಟ್ಟಣದಲ್ಲಿ ಮುಖ್ಯ ರಸ್ತೆಯನ್ನು ಹೊರತುಪಡಿಸಿ ಎಲ್ಲ ಬೀದಿಗಳಲ್ಲಿನ ಸಂಚಾರ ಬಂದ್ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಹೇಳಿದರು.

ಪಟ್ಟಣದ ಕೋಟೆ ಆವರಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಲಾಕ್‌ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ಕರೊನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಸೇರಿ ಹಲವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು. ಶಾಸಕ ಮಹಾಂತೇಶ ದೊಡಗೌಡರ, ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಟಿಎಚ್‌ಒ
ಎಸ್.ಎಸ್. ಸಿದ್ದಣ್ಣವರ ಮಾತನಾಡಿದರು. ಡಾ. ಎಸ್.ಸಿ. ಮಾಸ್ತಿಹೊಳಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ, ತಹಸೀಲ್ದಾರ್ ಪ್ರವೀಣ ಜೈನ್, ಸಿಪಿಐ ಶ್ರೀಕಾಂತ ತೊಟಗಿ, ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net