

ಬೆಂಗಳೂರು ಗ್ರಾಮಾಂತರ: ಕರೊನಾ ತಡೆಗೆ ಮುಂಜಾಗ್ರತೆಯೇ ಮದ್ದು, ಕರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕಿನ ಸರಪಳಿಯನ್ನು ತುಂಡರಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಖಾತೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಹೊಸಕೋಟೆ ತಾಲೂಕು ಅನುಗೊಂಡನಹಳ್ಳಿ ಹೋಬಳಿ ಕಲ್ಕುಂಟೆ ಗ್ರಾಪಂ ವ್ಯಾಪ್ತಿಯ ನಾರಾಯಣಕೆರೆಯಲ್ಲಿ ಎಂಟಿಬಿ ಚಾರಿಟಬಲ್ ಟ್ರಸ್ಟ್ ಹಾಗೂ ಮಹಾವೀರ್ ಜೈನ್ ಆಸ್ಪತ್ರೆ ಸಹಯೋದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದ್ದರೂ ನೆರೆ ರಾಜ್ಯಗಳಲ್ಲಿ 3ನೇ ಅಲೆ ವೇಗವಾಗಿ ಹರಡುತ್ತಿದ್ದು ರಾಜ್ಯದಲ್ಲೂ ಆತಂಕ ಎದುರಾಗಿದೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಮುಖ್ಯವಾಗಿ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡಿಕೊಳ್ಳುವುದು ಸೇರಿ ಕರೊನಾ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದರು.
ಲಸಿಕೆ ಪಡೆದರೆ ಪ್ರಾಣಾಪಾಯವಿಲ್ಲ: ಪ್ರತಿಯೊಬ್ಬರೂ ಕರೊನಾ ಲಸಿಕೆ ಪಡೆಯಬೇಕು. ಈಗಾಗಲೇ ಮೊದಲ ಡೋಸ್ ಪಡೆದಿರುವವರು ಎರಡನೇ ಡೋಸ್ ಕಡ್ಡಾಯವಾಗಿ ಪಡೆಬೇಕು. ಲಸಿಕೆ ಪಡೆದವರಿಗೆ ಕರೊನಾ ಾಸಿಟಿವ್ ಬಂದರೂ ಲಸಿಕೆ ಪಡೆದವರಿಗೆ ಾಸಿಟಿವ್ ಬಂದರೂ ಯಾವುದೇ ಪ್ರಾಣಾಪಾಯವಿರುವುದಿಲ್ಲ ಎಂದು ಎಂಟಿಬಿ ನಾಗರಾಜ್ ಹೇಳಿದರು.
ಈ ಬಗ್ಗೆ ತಜ್ಞರು ವರದಿ ನೀಡಿದ್ದಾರೆ ಎಂದು ಹೇಳಿದರು. ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆಯುವ ಮೂಲಕ ಕರೊನಾ ಮಾರಿಯನ್ನು ಕಟ್ಟಿಹಾಕಬೇಕು, ನೆರೆಹೊರೆಯವರಿಗೆ ಸ್ನೇಹಿತರಿಗೆ ಬಂಧುಗಳಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಎಲ್ಲರೂ ಲಸಿಕೆ ಪಡೆಯುವಂತೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಅಡ್ಡಪರಿಣಾಮವಿಲ್ಲ: ಕರೊನಾ ಲಸಿಕೆ ಪಡೆಯುವುದರಿಂದ ಆರೋಗ್ಯದಲ್ಲಿ ಯಾವುದೇ ಅಡ್ಡಪರಿಣಾಮವಿರುವುದಿಲ್ಲ, ಈ ಬಗ್ಗೆ ಕೆಲವರು ಗೊಂದಲ ಮೂಡಿಸುತ್ತಿದ್ದಾರೆ. ಅನವಶ್ಯಕವಾಗಿ ಆತಂಕ ಸೃಷ್ಟಿಸುತ್ತಾರೆ. ಈ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಸಚಿವರು ಮನವಿ ಮಾಡಿದರು.
ಹೊಸಕೋಟೆ ತಾಲೂಕಿನಲ್ಲಿ ಈಗಾಗಲೇ ಸರ್ಕಾರದಿಂದ 98 ಸಾವಿರ ಮಂದಿಗೆ ವ್ಯಾಕ್ಸಿನ್ ಹಾಕಲಾಗಿದೆ. ಹಾಗೆಯೇ ತಾಲೂಕಿನ 28 ಪಂಚಾಯಿತಿಗಳಲ್ಲಿ ಎಂಟಿಬಿ ಚಾರಿಟಬಲ್ ಟ್ರಸ್ಟ್ ಮೂಲಕ 28 ಸಾವಿರ ಮಂದಿಗೆ ಉಚಿತವಾಗಿ ವ್ಯಾಕ್ಸಿನ್ ಹಾಕಲಾಗಿದೆ. ಮುಂದಿನ ದಿನಗಳಲ್ಲೂ ಈ ಕಾರ್ಯಕ್ರಮ ಮುಂದುವರೆಯಲಿದೆ ಎಂದು ತಿಳಿಸಿದರು.